ಕೆಎಸ್‌ಆರ್‌ಟಿಸಿ ಬಸ್ ಢಿಕ್ಕಿ: ಪಾದಚಾರಿ ಮೃತ್ಯು
Update: 2023-04-17 20:52 IST
ಉಡುಪಿ : ಕೆಎಸ್‌ಆರ್‌ಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಗರದ ತ್ರೀವೇಣಿ ಸರ್ಕಲ್ ಬಳಿ ಎ.17ರಂದು ಬೆಳಗಿನ ಜಾವ ನಡೆದಿದೆ.
ಮೃತರನ್ನು ರಾಜಶೇಖರ ಪೂಜಾರಿ (68) ಎಂದು ಗುರುತಿಸಲಾಗಿದೆ. ಇವರು ರೂಮಿನಿಂದ ತ್ರಿವೇಣಿ ಹೊಟೇಲಿಗೆ ಕೆಲಸ ಬರುತ್ತಿರುವಾಗ ಉಡುಪಿ ಕೆಎಂ ಮಾರ್ಗ ಕಡೆಯಿಂದ ಉಡುಪಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಕಡೆಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.
ಇದರಿಂದ ಗಂಭೀರ ಸ್ವರೂಪದ ಗಾಯಗೊಂಡ ಅವರು ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.