×
Ad

ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ಬೆನ್ನಲ್ಲೇ ಹುಬ್ಬಳ್ಳಿಗೆ ನಾಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಭೇಟಿ

Update: 2023-04-17 21:35 IST

ಬೆಂಗಳೂರು, ಎ. 17: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ಬೆನ್ನಲ್ಲೇ ಬಿಜೆಪಿ ರಾಷ್ಟ್ರೀಯಾಧ್ಯಕ್ಷ ಜೆ.ಪಿ.ನಡ್ಡಾ ಅವರು ನಾಳೆ (ಎ.18) ಸಂಜೆ 4.30ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಾರೆ. ನಂತರ ಡೆನಿಸೆನ್ಸಿ ಹೋಟೆಲ್‍ಗೆ ತೆರಳಲಿದ್ದು, ಸಂಜೆ 5.30ಕ್ಕೆ ಬಿವಿಬಿ ಕಾಲೇಜಿನ ಆಡಿಟೋರಿಯಂನಲ್ಲಿ ಪ್ರಬುದ್ಧರ ಜೊತೆ ಸಂವಾದದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಧಾನ ಕಾರ್ಯದರ್ಶಿ ಸಿದ್ದರಾಜು ತಿಳಿಸಿದ್ದಾರೆ.

ಅಂದು ಸಂಜೆ 7 ಗಂಟೆಗೆ ಗೋಕುಲ ರಸ್ತೆಯ ಕ್ಯೂಬಿಕ್ಸ್ ಹೋಟೆಲಿನಲ್ಲಿ ಬಿಜೆಪಿ ಧಾರವಾಡ ವಿಭಾಗದ ಶಕ್ತಿಕೇಂದ್ರ, ಮಹಾಶಕ್ತಿಗಳ, ಜಿಲ್ಲಾ/ಮಂಡಲ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದು, ಎ.19ರ ಬೆಳಗ್ಗೆ 9.35ಕ್ಕೆ ಹುಬ್ಬಳ್ಳಿಯ ಸಿದ್ದಾರೂಢಮಠ ಮತ್ತು ಮೂರು ಸಾವಿರ ಮಠಕ್ಕೆ ತೆರಳಿ ಪೂಜೆ ಸಲ್ಲಿಸುವರು.

ನಂತರ ಹೆಲಿಕಾಪ್ಟರ್ ಮೂಲಕ ಹಾವೇರಿ ಜಿಲ್ಲೆಯ ಶಿಗ್ಗಾವಿಗೆ ತೆರಳಿ 12 ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನಾಮಪತ್ರ ಸಲ್ಲಿಕೆ ಸಂಬಂಧ ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸುವರು. ಮಧ್ಯಾಹ್ನ 2.30ಕ್ಕೆ ಅವರು ಹುಬ್ಬಳ್ಳಿಯಿಂದ ಹೊಸದಿಲ್ಲಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Similar News