ಅಪಾರ್ಟ್‌ಮೆಂಟ್‌ನಿಂದ ಬಿದ್ದು ಕಾರ್ಮಿಕ ಮೃತ್ಯು
Update: 2023-04-17 21:37 IST
ಮಂಗಳೂರು: ನಗರದ ದೇರೆಬೈಲ್ ಕೊಂಚಾಡಿಯ ಅಪಾರ್ಟ್‌ಮೆಂಟ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ನೊಬ್ಬ ಬಿದ್ದು ಮೃತಪಟ್ಟ ಘಟನೆ ಶನಿವಾರ ನಡೆದಿರುವುದಾಗಿ ವರದಿಯಾಗಿದೆ.
ಜಿತೇಂದ್ರ (44) ಮೃತಪಟ್ಟ ಕಾರ್ಮಿಕ. ನೀರುಮಾರ್ಗದ ಗುತ್ತಿಗೆದಾರ ಅವೀನ್ ಅವರೊಂದಿಗೆ ಹಳೆಯ ಪೈಬರ್ ಶೀಟ್ ಬದಲಿ ಮಾಡುವ, ಕಬ್ಬಿನದ ಶೀಟ್‌ಗಳಿಗೆ ಸ್ಕ್ರೂ ಅಳವಡಿಸುವ ಕೆಲಸವನ್ನು ಇವರು ಮಾಡುತ್ತಿದ್ದರು.
ಅದರಂತೆ ಶನಿವಾರ ಬೆಳಗ್ಗೆ ಕೆಲಸ ಮಾಡುತ್ತಿದ್ದಾಗ ಕೆಳಗೆ ಬಿದ್ದಿದ್ದು, ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಬಳಿಕ ಸರಕಾರಿ ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಷ್ಟರಲ್ಲಿ ಜಿತೇಂದ್ರ ಮೃತಪಟ್ಟಿದ್ದರು ಎನ್ನಲಾಗಿದೆ.
ಈ ಘಟನೆಗೆ ಗುತ್ತಿಗೆದಾರರು ನಿರ್ಲಕ್ಷ್ಯ ವಹಿಸಿರುವುದೇ ಕಾರಣ ಎಂದು ಕಾವೂರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.