×
Ad

ಅತೀಕ್ ಅಹ್ಮದ್, ಆತನ ಸಹೋದರ ಅಶ್ರಫ್ ಹತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಕೋರಿದ ಅರ್ಜಿ ವಿಚಾರಣೆಗೆ ಸುಪ್ರೀಂ ಅಸ್ತು

Update: 2023-04-18 12:55 IST

ಹೊಸದಿಲ್ಲಿ: ದರೋಡೆಕೋರ- ರಾಜಕಾರಣಿ ಅತೀಕ್ ಅಹ್ಮದ್ ಹಾಗೂ  ಆತನ ಸಹೋದರ ಅಶ್ರಫ್ ಹತ್ಯೆ ಪ್ರಕರಣವನ್ನು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸ್ವತಂತ್ರ ತನಿಖೆಗೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಗೆ  ಸುಪ್ರೀಂ ಕೋರ್ಟ್(Supreme Court ಇಂದು ಒಪ್ಪಿಕೊಂಡಿದೆ.

 ಸುಪ್ರೀಂ ಕೋರ್ಟ್‌ನಲ್ಲಿ  ಈ ಅರ್ಜಿಯ ವಿಚಾರಣೆ ಎಪ್ರಿಲ್ 24 ರಂದು ನಡೆಯಲಿದೆ.

ಉತ್ತರ ಪ್ರದೇಶದಲ್ಲಿ ನಡೆದಿರುವ ನ್ಯಾಯಾಂಗೇತರ ಹತ್ಯೆಗಳ ಬಗ್ಗೆಯೂ ತನಿಖೆ ನಡೆಸುವಂತೆ ಅರ್ಜಿಯಲ್ಲಿ ಕೋರಲಾಗಿದೆ. ಕೊಲೆಗಳ ತನಿಖೆಗೆ ಸ್ವತಂತ್ರ ತಜ್ಞರ ಸಮಿತಿಯನ್ನು ರಚಿಸುವಂತೆ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಲಾದ ಅರ್ಜಿಯಲ್ಲಿ ಕೋರಲಾಗಿದೆ.

ಶನಿವಾರ ಪ್ರಯಾಗ್‌ರಾಜ್‌ನಲ್ಲಿ ವೈದ್ಯಕೀಯ ತಪಾಸಣೆಗಾಗಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಪತ್ರಕರ್ತರಂತೆ ನಟಿಸಿದ ಮೂವರು ದುಷ್ಕರ್ಮಿಗಳು ಕೈಕೋಳದಲ್ಲಿದ್ದ  ಅಹ್ಮದ್ ಹಾಗೂ  ಅಶ್ರಫ್ ಅವರನ್ನು ಗುಂಡಿಕ್ಕಿ ಕೊಂದಿದ್ದರು.

Similar News