ಬೆಂಗಳೂರು: ಅಪಾರ್ಟ್ ಮೆಂಟ್ ಮೇಲಿಂದ ಬಿದ್ದು ಮಹಿಳೆ ಮೃತ್ಯು
Update: 2023-04-18 18:59 IST
ಬೆಂಗಳೂರು, ಎ.18: ಅಪಾರ್ಟ್ ಮೆಂಟ್ ಮೇಲಿಂದ ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಂಗಳವಾರ ಬೆಳಗ್ಗೆ 8ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಮೃತ ಮಹಿಳೆಯನ್ನು ಸೋನು ಪೂಜಾರಿ ಎಂದು ಗುರುತಿಸಲಾಗಿದೆ.
ಸೋನು ಪೂಜಾರಿಗೆ ವಿವಾಹವಾಗಿದ್ದು, ಪತಿ ನಿರಂಜನ್ ಜೊತೆ ವಾಸವಿದ್ದಳು. ಈಕೆಯ ಪತಿ ನಿರಂಜನ್ ಕೆಲಸದ ನಿಮಿತ್ತ ಮುಂಬೈಗೆ ತೆರಳಿದ್ದು, ಮಂಗಳವಾರ ಬೆಳಗ್ಗೆ 8 ಗಂಟೆ ಸುಮಾರಿಗೆ ಅಪಾರ್ಟ್‍ಮೆಂಟಿನ ನಾಲ್ಕನೇ ಮಹಡಿಯಿಂದ ಬಿದ್ದಿದ್ದು ಸ್ಥಳಕ್ಕೆ ಪುಟ್ಟೇನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇನ್ನೂ, ಸೋನು ಪೂಜಾರಿ ಮನೆಯಲ್ಲಿ ಒಬ್ಬರೇ ಇದ್ದರು. ಅವರ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಪುಟ್ಟೇನಹಳ್ಳಿ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.