ಬೈಂದೂರು ಕಾಂಗ್ರೆಸ್ ಅಭ್ಯರ್ಥಿ ಗೋಪಾಲ ಪೂಜಾರಿ ನಾಮಪತ್ರ ಸಲ್ಲಿಕೆ
Update: 2023-04-18 19:00 IST
ಬೈಂದೂರು, ಎ.18: ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ ಇಂದು ನಾಮಪತ್ರ ಸಲ್ಲಿಸಿದರು.
ಬೈಂದೂರು ಹೊಸ ಬಸ್ ನಿಲ್ದಾಣದ ಬಳಿ ಇಂದು ಹಮ್ಮಿಕೊಳ್ಳಲಾದ ಬಹಿರಂಗ ಸಭೆಯ ಬಳಿಕ ತಾಲೂಕು ಕಚೇರಿಗೆ ಆಗಮಿಸಿದ ಚುನಾವಣಾಧಿಕಾರಿ ಜಗದೀಶ ಗಂಗಣ್ಣನವರ್ ನಾಮಪತ್ರ ಸಲ್ಲಿಸಿದರು.
ಬಳಿಕ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಭರವಸೆಗಳನ್ನು ಕಾರ್ಯ ಕರ್ತರು ಮನೆಮನೆಗೆ ತಲುಪಿಸುವ ಕೆಲಸ ಮಾಡಿದ್ದಾರೆ. ಈ ಬಾರಿ 35 ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಗೆಲವು ಸಾಧಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡರಾದ ವಾಸುದೇವ ಯಡಿಯಾಳ, ಎಸ್.ರಾಜು ಪೂಜಾರಿ, ಪ್ರಕಾಶ್ಚಂದ್ರ ಶೆಟ್ಟಿ, ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ ಗುಡಿಬೆಟ್ಟು ಉಪಸ್ಥಿತರಿದ್ದರು.