ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ ಮಾಜಿ ಸಂಸದ ಬಿ.ವಿ.ನಾಯಕ
Update: 2023-04-18 21:48 IST
ಬೆಂಗಳೂರು, ಎ.18: ರಾಯಚೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಮತ್ತು ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ಮಾಜಿ ಲೋಕಸಭಾ ಸದಸ್ಯ ಬಿ.ವಿ.ನಾಯಕ ಮಂಗಳವಾರ ರಾಜೀನಾಮೆ ನೀಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವ ಅವರು, ತಾನು ಸ್ವ ಇಚ್ಛೆಯಿಂದ ಪಕ್ಷದ ಸದಸ್ಯತ್ವ ಹಾಗೂ ಜಿಲ್ಲಾಧ್ಯಕ್ಷ ಸ್ಥಾನಗಳಿಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಬಿ.ವಿ.ನಾಯಕ ರವರು ರಾಯಚೂರು ಜಿಲ್ಲೆಯ ಪ.ಪಂಗಡ ಮೀಸಲು ವಿಧಾನಸಭಾ ಕ್ಷೇತ್ರಗಳಾದ ಮಾನ್ವಿ, ರಾಯಚೂರು ಗ್ರಾಮೀಣ, ದೇವದುರ್ಗ ಕ್ಷೇತ್ರಗಳಲ್ಲಿ ಕಾಂಗ್ರೇಸ್ ಪಕ್ಷದಿಂದ ಸ್ಪರ್ಧೆಗೆ ಅರ್ಜಿ ಸಲ್ಲಿಸಿದ್ದರು. ಆದರೆ ಕಾಂಗ್ರೇಸ್ ಹೈಕಮಾಂಡ್ ಮೂರು ಕ್ಷೇತ್ರಗಳಿಂದಲೂ ಅವರಿಗೆ ಟಿಕೆಟ್ ನೀಡಲು ನಿರಾಕರಿಸಿದರಿಂದ ಈ ತೀರ್ಮಾನಕ್ಕೆ ಬಂದಿದ್ದಾರೆ ಎಂದು ತಿಳಿದುಬಂದಿದೆ.