ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮಾಜಿ ಸಂಸದ ಬಿ.ವಿ. ನಾಯಕ್
Update: 2023-04-19 10:34 IST
ಹುಬ್ಬಳ್ಳಿ: ರಾಯಚೂರು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಮಾಜಿ ಸಂಸದ ಬಿ.ವಿ. ನಾಯಕ್ ಅವರು ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಮಂಗಳವಾರ ಹುಬ್ಬಳ್ಳಿಯ ಶಕ್ತಿ ಕೇಂದ್ರದ ಪದಾಧಿಕಾರಿಗಳ ಸಭೆ ಬಳಿಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಸಮ್ಮುಖದಲ್ಲಿ ಬಿ.ವಿ. ನಾಯಕ್ ಅವರು ಬಿಜೆಪಿ ಸೇರಿದ್ದಾರೆ. ಬಿ.ವಿ. ನಾಯಕ್ ಬಿಜೆಪಿ ಟಿಕೆಟ್ ಪಡೆದು ಮಾನ್ವಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ತಿಳಿದುಬಂದಿದೆ.
ಬಿ.ವಿ.ನಾಯಕ್ ರವರು ರಾಯಚೂರು ಜಿಲ್ಲೆಯ ಪ.ಪಂಗಡ ಮೀಸಲು ವಿಧಾನಸಭಾ ಕ್ಷೇತ್ರಗಳಾದ ಮಾನ್ವಿ, ರಾಯಚೂರು ಗ್ರಾಮೀಣ, ದೇವದುರ್ಗ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆಗೆ ಅರ್ಜಿ ಸಲ್ಲಿಸಿದ್ದರು. ಆದರೆ ಕಾಂಗ್ರೆಸ್ ಹೈಕಮಾಂಡ್ ಮೂರು ಕ್ಷೇತ್ರಗಳಿಂದಲೂ ಅವರಿಗೆ ಟಿಕೆಟ್ ನೀಡಲು ನಿರಾಕರಿಸಿದರಿಂದ ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದಾರೆ.