×
Ad

ಪದ್ಮನಾಭನಗರ ಕ್ಷೇತ್ರದಲ್ಲಿ ಆರ್.ಅಶೋಕ್ ವಿರುದ್ಧ ಡಿ.ಕೆ ಸುರೇಶ್ ಕಣಕ್ಕೆ?: ಕುತೂಹಲ ಮೂಡಿಸಿದ ಡಿಕೆಶಿ ಹೇಳಿಕೆ

Update: 2023-04-19 11:51 IST

ಬೆಂಗಳೂರು: ಪದ್ಮನಾಭನಗರ ಕ್ಷೇತ್ರದಿಂದ ಡಿ.ಕೆ ಸುರೇಶ್ ಕೂಡ ನಾಮಪತ್ರ ಸಲ್ಲಿಸಲಿದ್ದಾರೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿಸಿದೆ. 

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಪದ್ಮನಾಭನಗರ ಅಭ್ಯರ್ಥಿಯಾಗಿ ಇಂದು ರಘುನಾಥನಾಯ್ಡು ನಾಮಪತ್ರ ಸಲ್ಲಿಸಲಿದ್ದಾರೆ. ನಮ್ಮ ಅಭ್ಯರ್ಥಿ ರಘುನಾಥ ನಾಯ್ಡು ಗೆಲ್ಲುವ ವಾತಾವರಣ ಇದೆ. ಅವರ ಪರವಾಗಿ ಪ್ರಚಾರದಲ್ಲಿ ಭಾಗಿಯಾಗಲಿದ್ದೇನೆ. ಹಾಗೇ ಪದ್ಮನಾಭನಗರದಲ್ಲಿ ಡಿ.ಕೆ.ಸುರೇಶ್ ಸಹ ನಾಮಪತ್ರ ಸಲ್ಲಿಸಲಿದ್ದಾರೆ' ಎಂದು ಹೇಳಿದರು.

ಇನ್ನೂ ಈ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ರಾಮನಗರ ಸಂಸದ ಡಿ.ಕೆ ಸುರೇಶ್ 'ಹೈಕಮಾಂಡ್ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ' ಎಂದು ಹೇಳಿದ್ದಾರೆ.

Similar News