ವಿಧಾನಸಭೆ ಚುನಾವಣೆ: 40 ತಾರಾ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್
ಜಗದೀಶ್ ಶೆಟ್ಟರ್, ನಟಿ ರಮ್ಯಾ, ಉಮಾಶ್ರೀಗೆ ಸ್ಥಾನ
Update: 2023-04-19 16:41 IST
ಬೆಂಗಳೂರು: ಮುಂಬರಲಿರುವ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಮಾಡುವ ಪಕ್ಷದ 40 ತಾರಾ ಪ್ರಚಾರಕರ ಹೆಸರುಗಳನ್ನು ಬಿಡುಗಡೆ ಮಾಡಲಾಗಿದೆ.
ಪಟ್ಟಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಶಶಿ ತರೂರ್, ರಮ್ಯಾ, ಉಮಾಶ್ರೀ, ಜಗದೀಶ್ ಶೆಟ್ಟರ್, ಸತೀಶ್ ಜಾರಕಿಹೊಳಿ, ಡಿ.ಕೆ.ಸುರೇಶ್, ಝಮೀರ್ ಅಹ್ಮದ್ ಖಾನ್, ವೀರಪ್ಪ ಮೊಯ್ಲಿ, ಡಾ.ಪರಮೇಶ್ವರ್, ರಣದೀಪ್ ಸಿಂಗ್ ಸುರ್ಜೇವಾಲ, ಚಿದಂಬರಂ ಸೇರಿ 40 ನಾಯಕರನ್ನು ಹೆಸರಿಸಲಾಗಿದೆ.
ಇನ್ನು ಟಿಕೆಟ್ ವಂಚಿತ ಮಾಜಿ ಸಚಿವೆ ಉಮಾಶ್ರೀ ಹೆಸರು ಪಟ್ಟಿಯಲ್ಲಿರುವುದು ವಿಶೇಷ.
ಕಾಂಗ್ರೆಸ್ ತಾರಾ ಪ್ರಚಾರಕರ ಪಟ್ಟಿ ಇಂತಿದೆ...