ಕೇಂದ್ರದಿಂದ ಪ್ರಧಾನಿ ಮೋದಿ ಕಳುಹಿಸುವ ಹಣ ಪಡೆಯಲು ಕರ್ನಾಟಕದಲ್ಲಿ ಬಿಜೆಪಿ ಅಧಿಕಾರದಲ್ಲಿರಬೇಕು: ಜೆ.ಪಿ.ನಡ್ಡಾ
ಹಾವೇರಿ, ಎ. 19: ‘ಕೇಂದ್ರದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಕಳುಹಿಸಿದ ಹಣ ಸಮರ್ಪಕವಾಗಿ ಬಳಕೆಯಾಗಲು ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕು’ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ತಿಳಿಸಿದ್ದಾರೆ.
ಬುಧವಾರ ಇಲ್ಲಿನ ಜಿಲ್ಲೆಯ ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಮಪತ್ರ ಸಲ್ಲಿಸಿದ ಬಳಿಕ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ‘ಕರ್ನಾಟಕಕ್ಕೆ ಪ್ರಧಾನಿ ಮೋದಿ ಅವರು ಕಳುಹಿಸಿದ ಹಣ ಸಮರ್ಪಕವಾಗಿ ಬಳಕೆಯಾಗಲು ಇಲ್ಲಿ ಅಭಿವೃದ್ಧಿ ಕಾರ್ಯ ನಿರಂತರವಾಗಿ ನಡೆಯಲು ಕಮಲದ ಚಿಹ್ನೆಯನ್ನು ಬೆಂಬಲಿಸಿ ಎಂದು ಕೋರಿದರು.
ಕಾಂಗ್ರೆಸ್ ಎಂದರೆ ಕಮಿಷನ್, ಭ್ರಷ್ಟಾಚಾರ, ಅಪರಾಧೀಕರಣದ ಪಕ್ಷ. ಕಾಂಗ್ರೆಸ್ ಮುಖಂಡರು ನೇತಾರರಾಗಿ ಉಳಿದಿಲ್ಲ. ಅವರು ಎಟಿಎಂ ಚಲಾಯಿಸುವ ವ್ಯಕ್ತಿಗಳಾಗಿದ್ದಾರೆ ಎಂದ ಅವರು, ಪ್ರಧಾನಿ ನರೇಂದ್ರ ಮೋದಿ ಕಳುಹಿಸಿದ ಅಭಿವೃದ್ಧಿಗೆ ಸಂಬಂಧಿಸಿದ ಹಣವನ್ನು ಹೊಸದಿಲ್ಲಿ ಕಾಂಗ್ರೆಸ್‍ಗೆ ವರ್ಗಾಯಿಸುವ ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಬೇಕೇ ಎಂದು ಪ್ರಶ್ನೆ ಮಾಡಿದರು.