ಕಾಪು: ಪಕ್ಷೇತರರಾಗಿ ಅಬ್ದುಲ್ ರಹಿಮಾನ್ ನಾಮಪತ್ರ ಸಲ್ಲಿಕೆ
Update: 2023-04-19 21:51 IST
ಕಾಪು: ಕಾಪು ವಿಧಾನಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಅಬ್ದುಲ್ ರಹಿಮಾನ್ ಬುಧವಾರ ಬೆಂಬಲಿಗರೊಂದಿಗೆ ಆಗಮಿಸಿ ಕಾಪು ಚುನಾವಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ಬಳಿಕ ಮಾತನಾಡಿದ ಅವರು ಕಾಪು ಕ್ಷೇತ್ರದ ಅಭಿವೃದ್ಧಿ ನಮ್ಮ ಉದ್ದೇಶ, ಇಲ್ಲಿನ ಅಧಿಕಾರ ಆಡಳಿತ ವ್ಯವಸ್ಥೆಯಿಂದ ಜನ ಬೇಸತ್ತು ಹೋಗಿದ್ದಾರೆ. ಕಾಪು ಕ್ಷೇತ್ರದ ಅಭಿವೃದ್ಧಿ ಬಯಸುವ ಜನ ನಮ್ಮನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಲಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶೇಖ್ ಸೈಯದ್ ಮುಹಮ್ಮದ್, ಅಬ್ದುಲ್ ಖಾದರ್ ಉಪಸ್ಥಿತರಿದ್ದರು.