×
Ad

ಮಂಗಳೂರು ನಗರ ದಕ್ಷಿಣ: ಜೆ.ಆರ್.ಲೋಬೋ ನಾಮಪತ್ರ ಸಲ್ಲಿಕೆ

Update: 2023-04-20 13:10 IST

ಮಂಗಳೂರು, ಎ.20: ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಶಾಸಕ ಜೆ.ಆರ್. ಲೋಬೋ ಇಂದು ಮಧ್ಯಾಹ್ನ ನಾಮಪತ್ರ ಸಲ್ಲಿಸಿದರು.

ಬೆಳಗ್ಗೆ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಅವರು ಪಕ್ಷದ ನಾಯಕರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಅಭಿಮಾನಿಗಳ ಸಮ್ಮುಖದಲ್ಲಿ ಪಾದಯಾತ್ರೆಯ ಮೂಲಕ ಮಂಗಳೂರು ಮಹಾನಗರ ಪಾಲಿಕೆ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭ ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ, ಮಾಜಿ ಮೇಯರ್‌ಗಳಾದ ಶಶಿಧರ ಹೆಗ್ಡೆ, ಲ್ಯಾನ್ಸಿ ಲಾಟ್ ಪಿಂಟೋ, ಮಾಜಿ ಕಾರ್ಪೊರೇಟರ್ ನವಾಝ್, ಪಕ್ಷದ ಮುಖಂಡರಾದ ಟಿ.ಕೆ.ಸುಧೀರ್, ಹರೀಶ್ ಉಪಸ್ಥಿತರಿದ್ದರು.

Similar News