×
Ad

ಮಂಗಳೂರು: ಯು.ಟಿ.ಖಾದರ್ ನಾಮಪತ್ರ ಸಲ್ಲಿಕೆ

Update: 2023-04-20 14:11 IST

ಕೊಣಾಜೆ, ಎ.20: ಮಂಗಳೂರು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿಧಾನಸಭೆ ವಿಪಕ್ಷ ಉಪನಾಯಕ, ಶಾಸಕ ಯು.ಟಿ.ಖಾದರ್ ಇಂದು ನಾಮಪತ್ರ ಸಲ್ಲಿಸಿದರು.

ಭಾರೀ ಮೆರವಣಿಗೆಯಲ್ಲಿ ತೆರಳಿದ ಅವರು, ಉಳ್ಳಾಲ ನಗರಸಭೆ ಕಾರ್ಯಾಲಯದಲ್ಲಿರುವ ಕ್ಷೇತ್ರ ಚುನಾವಣಾಧಿಕಾರಿ ಕೆ.ರಾಜು ಅವರಿಗೆ  ನಾಮಪತ್ರ ಸಲ್ಲಿಸಿದರು.

ಇದಕ್ಕೂ ಮುನ್ನ ಅವರು ಸೋಮೇಶ್ವರ ದೇವಸ್ಥಾನ, ಉಳ್ಳಾಲ ದರ್ಗಾ ಸಹಿತ ವಿವಿಧ ಕ್ಷೇತ್ರಗಳಿಗೆ ಭೇಟಿ ನೀಡಿದರು. ಬಳಿಕ ಉಳ್ಳಾಲ ಬೈಲ್ ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿದ ಯು.ಟಿ.ಖಾದರ್, ಇದು ಸತ್ಯ ಧರ್ಮದ, ಅನ್ಯಾಯದ ವಿರುದ್ಧದ ನ್ಯಾಯದ ಚುನಾವಣೆಯಾಗಿದೆ. ಜನವಿರೋದಿ, ತಾರತಮ್ಯ ಮಾಡುವ ಸರ್ಕಾರವನ್ನು ಕೆಳಗಿಸುವ ಚುನಾವಣೆಯಾಗಿದೆ ಎಂದರು.

 ಹಲವು ಧರ್ಮ, ಜಾತಿಯ ಜನರ ನಡುವೆ ಸೌಹಾರ್ದದ ಕೊಂಡಿಯಾಗಿ ಕಾರ್ಯನಿರ್ವಹಿಸಿ, ಕ್ಷೇತ್ರದ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡು  ತೃಪ್ತಿ ಇದೆ‌. ನಿಮ್ಮೆಲ್ಲರ ಪ್ರೀತಿ ವಿಶ್ವಾಸದಿಂದ ಮತ್ತೊಮ್ಮೆ ಗೆದ್ದು ಇನ್ನಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತೇನೆ ಎಂದರು.

ಸಮಾವೇಶದ ಬಳಿಕ ಅಬ್ಬಕ್ಕ ಸರ್ಕಲ್ ವರೆಗೆ ಬೃಹತ್ ಮೆರವಣಿಗೆಯಲ್ಲಿ ತೆರಳಿದ ಯು.ಟಿ.ಖಾದರ್ ನಾಮಪತ್ರ ಸಲ್ಲಿಸಿದರು.

ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ, ಇಬ್ರಾಹೀಂ ಕೋಡಿಜಾಲ್, ಡಾ.ಕಣಚೂರು ಮೋನು, ಹರ್ಷರಾಜ್ ಮುದ್ಯ, ದಿನೇಶ್ ರೈ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್, ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ, ಮುಖಂಡರಾದ ರಾಕೇಶ್ ಮಲ್ಲಿ, ಈಶ್ವರ್ ಉಳ್ಳಾಲ್, ಮಮತಾ ಡಿ.ಎಸ್.ಗಟ್ಟಿ, ಚಂದ್ರಹಾಸ್ ಕರ್ಕೇರ, ಮಹಾಬಲ ಹೆಗ್ಡೆ, ಶಾಹುಲ್ ಹಮೀದ್, ಮುಹಮ್ಮದ್ ಮೋನು, ಅಶ್ರಫ್ ಕೆ.ಸಿ.ರೋಡ್, ಟಿ.ಎಸ್.ಅಬ್ದುಲ್ಲಾ ಸಾಮಣಿಗೆ, ಸಿದ್ದೀಕ್, ಫಾರೂಕ್ ಉಳ್ಳಾಲ್, ದೇವದಾಸ್ ಭಂಡಾರಿ, ಜೀವನ್ ದಾಸ್ ಶೆಟ್ಟಿ, ಪದ್ಮನಾಭ ನರಿಂಗಾನ, ಮುಸ್ತಫಾ ಹರೇಕಳ ಮತ್ತಿತರರು ಭಾಗವಹಿಸಿದ್ದರು.

Similar News