×
Ad

ಕಡೂರು ಜೆಡಿಎಸ್‌ ಅಭ್ಯರ್ಥಿ ವೈಎಸ್‌ವಿ ದತ್ತ ವಿರುದ್ಧ 41 ಚೆಕ್‌ ಬೌನ್ಸ್‌ ಪ್ರಕರಣ

Update: 2023-04-20 15:50 IST

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಕಡೂರು ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ವೈಎಸ್‌ವಿ ದತ್ತ ಅವರ ವಿರುದ್ಧ ಚೆಕ್‌ಬೌನ್ಸ್‌ನ 41 ಪ್ರಕರಣಗಳು ದಾಖಲಾಗಿವೆ.

ಜೆಡಿಎಸ್ ಅಭ್ಯರ್ಥಿ ವೈಎಸ್​ವಿ ದತ್ತಾ ವಿರುದ್ಧ 41 ಚೆಕ್ ಬೌನ್ಸ್ ಪ್ರಕರಣಗಳು  ದಾಖಲಾಗಿವೆ ಎಂಬ ಮಾಹಿತಿಯನ್ನು ಚುನಾವಣಾ ಅಧಿಕಾರಿಗಳಿಗೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ನೀಡಿದ್ದಾರೆ. 2014 ರಿಂದ 2023ರ ವರೆಗೆ ರಾಜ್ಯ ಹೊರರಾಜ್ಯಗಳಲ್ಲಿ 41 ಚೆಕ್​​ಬೌನ್ಸ್ ಪ್ರಕರಣಗಳು ದಾಖಲಾಗಿವೆ.

ವೈಎಸ್​ವಿ ದತ್ತ ಅವರ ಬಳಿ 2022-23 ರಲ್ಲಿ 8 ಲಕ್ಷದ 15 ಸಾವಿರ ಆದಾಯ ಹೊಂದಿದ್ದಾರೆ. 17.89 ಲಕ್ಷ ಮೌಲ್ಯದ ಚರಾಸ್ತಿ, 2.94 ಕೋಟಿ ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ. ಒಟ್ಟು 93.19 ಲಕ್ಷ ಸಾಲ ಪಡೆದುಕೊಂಡಿದ್ದಾರೆ.

Similar News