ಬಂಟ್ವಾಳ: ಮಹಡಿ ಮೇಲಿನಿಂದ ಬಿದ್ದು ಯುವಕ ಮೃತ್ಯು
Update: 2023-04-20 21:08 IST
ಬಂಟ್ವಾಳ: ಯುವಕನೋರ್ವ ಕೆಲಸ ಮಾಡುತ್ತಿದ್ದ ವೇಳೆ ಮಹಡಿ ಮೇಲಿನಿಂದ ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಮಾಡಮೆ ಎಂಬಲ್ಲಿ ನಡೆದಿದೆ.
ಸಿದ್ದಕಟ್ಟೆ ದೇವಸ್ಯ ನಿವಾಸಿ ದುರ್ಗಾ ಪ್ರಸಾದ್ ಮೃತರು ಎಂದು ಗುರುತಿಸಲಾಗಿದೆ.
ಸಿದ್ಧಕಟ್ಟೆ ಸಮೀಪದ ಮಾಡಮೆ ಎಂಬಲ್ಲಿ ಮನೆಯೊಂದರಲ್ಲಿ ಪ್ಲಂಬಿಂಗ್ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಮೇಲಿನಿಂದ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.