ಕಾಪು: ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಜಗಳ; ಓರ್ವನ ಕೊಲೆಯಲ್ಲಿ ಅಂತ್ಯ
Update: 2023-04-21 11:48 IST
ಕಾಪು,ಎ.17: ಕುಡಿದ ಮತ್ತಿನಲ್ಲಿ ಇಬ್ಬರ ನಡುವೆ ಜಗಳ ನಡೆದಿದ್ದು, ಒಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಗುರುವಾರ ರಾತ್ರಿ ಉದ್ಯಾವರ ಸಮೀಪದ ಪಿತ್ರೋಡಿ ಎಂಬಲ್ಲಿ ನಡೆದಿದೆ.
ಕೊಲೆಯಾದವರನ್ನು ಪಿತ್ರೋಡಿ ನಿವಾಸಿ ದಯಾನಂದ್ (40) ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ ಭರತ್ ನನ್ನು ಕಾಪು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಬಾರ್ ನಲ್ಲಿ ಕುಡಿದ ಬಳಿಕ ಇಬ್ಬರು ಕ್ಷುಲ್ಲಕ ಕಾರಣಕ್ಕಾಗಿ ಜಗಳ ಮಾಡಿಕೊಂಡಿದ್ದರು ಎನ್ನಲಾಗಿದೆ. ಈ ವೇಳೆ ಭರತ್ ಎಂಬವನು ದಯಾನಂದ್ ಗೆ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಇದರಿಂದ ಗಂಭೀರವಾಗಿ ಗಾಯಗೊಂಡ ದಯಾನಂದ ಆಸ್ಪತ್ರೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಕೊಲೆ ಮಾಡಿದ ಬಳಿಕ ತಲೆಮರೆಸಿಕೊಂಡಿದ್ದ ಭರತ್ ನನ್ನು ಸ್ಥಳಿಯರು ಪತ್ತೆ ಹಚ್ಚಿ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಕಾಪು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.