ಜಮ್ಮು ಕಾಶ್ಮೀರ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಗೆ ಸಿಬಿಐ ಸಮನ್ಸ್
ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರಿಗೆ ಸಿಬಿಐ ಸಮನ್ಸ್ ನೀಡಿದೆ. ತನಿಖಾ ಸಂಸ್ಥೆಯು ಎಪ್ರಿಲ್ 28 ರಂದು ವಿಚಾರಣೆಗೆ ಹಾಜರಾಗುವಂತೆ ಸತ್ಯಪಾಲ್ ಮಲಿಕ್ ಅವರಿಗೆ ಸಮನ್ಸ್ ನೀಡಿದೆ.
ಇತ್ತೀಚೆಗೆ, ದಿ ವೈರ್‌ನ ಹಿರಿಯ ಪತ್ರಕರ್ತ ಕರಣ್ ಥಾಪರ್‌ಗೆ ನೀಡಿದ ಸಂದರ್ಶನದಲ್ಲಿ ಪುಲ್ವಾಮ ಘಟನೆಗೆ ಕೇಂದ್ರ ಸರ್ಕಾರದ ಲೋಪವೇ ಕಾರಣವಾಗಿತ್ತು ಎಂದು ಗಂಭೀರ ಆರೋಪ ಮಾಡಿದ್ದರು.
ವರದಿಗಳ ಪ್ರಕಾರ ರಿಲಯನ್ಸ್ ಇನ್ಶುರೆನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಯಲಿದೆ.
ಮಲಿಕ್ ಅವರು 2018 ರಲ್ಲಿ ಜಮ್ಮು ಮತ್ತು ಕಾಶ್ಮೀರದ ಗವರ್ನರ್ ಆಗಿದ್ದಾಗ ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಒಡೆತನದ ಕಂಪನಿಯ ಒಪ್ಪಂದವನ್ನು ರದ್ದುಗೊಳಿಸಿದ್ದರು.
ಎಫ್‌ಐಆರ್ ನಲ್ಲಿ, ಜಮ್ಮು ಮತ್ತು ಕಾಶ್ಮೀರದ ಸರ್ಕಾರಿ ನೌಕರರು ಮತ್ತು ಅವರ ಕುಟುಂಬಗಳಿಗೆ ವೈದ್ಯಕೀಯ ವಿಮಾ ಯೋಜನೆಯಲ್ಲಿ ನಡೆದಿದೆ ಎನ್ನಲಾದ ಈ ಹಗರಣದಲ್ಲಿ ರಿಲಯನ್ಸ್ ಜನರಲ್ ಇನ್ಶುರೆನ್ಸ್ ಜೊತೆಗೆ ಟ್ರಿನಿಟಿ ಮರುವಿಮಾ ಬ್ರೋಕರ್‌ಗಳನ್ನು ಸಿಬಿಐ ಆರೋಪಿಗಳೆಂದು ಹೆಸರಿಸಿದೆ.