ಲಂಚ ಪ್ರಕರಣ: ಮಾಡಾಳ್ ಪ್ರಶಾಂತ್‍ಗೆ ಹೈಕೋರ್ಟ್‍ನಿಂದ ಷರತ್ತುಬದ್ಧ ಜಾಮೀನು
Update: 2023-04-21 20:27 IST
ಬೆಂಗಳೂರು, ಎ.21: ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ(ಕೆಎಸ್‍ಡಿಎಲ್) ಟೆಂಡರ್‍ಗೆ ಸಂಬಂಧಿಸಿದ ಲಂಚ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್‍ಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಬಿಜೆಪಿ ಶಾಸಕರ ಪುತ್ರ ಮಾಡಾಳ್ ಪ್ರಶಾಂತ್‍ರನ್ನು ಕೆಎಸ್‍ಡಿಎಲ್ ಕಚೇರಿಯಲ್ಲಿ ತಂದೆಯ ಪರವಾಗಿ 40 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ಮಾ.2ರಂದು ಬಂಧಿಸಿದ್ದರು.
ಪ್ರಶಾಂತ್ ಮಾಡಾಳ್ ಬಂಧನದ ನಂತರ ಲೋಕಾಯುಕ್ತ ಪೊಲೀಸರು ಮಾಡಾಳ್ ವಿರೂಪಾಕ್ಷಪ್ಪ ಅವರ ಮನೆ ಮತ್ತು ಕಚೇರಿಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿ 8.23 ಕೋಟಿ ರೂಪಾಯಿ ಹಣವನ್ನು ವಶಪಡಿಸಿಕೊಂಡಿದ್ದಾರೆ.
ಈ ಸಂಬಂಧ ಕೆಎಸ್‍ಡಿಎಲ್ ಅಧ್ಯಕ್ಷರೂ ಆಗಿದ್ದ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧವೂ ಪ್ರಕರಣ ದಾಖಲಿಸಲಾಗಿತ್ತು. ಬಳಿಕ ಅವರು ಕೆಎಸ್‍ಡಿಎಲ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.