ಕರ್ತವ್ಯ ಲೋಪ: ಪೆರ್ಲ ಅಂಗನವಾಡಿ ಕಾರ್ಯಕರ್ತೆ ಅಮಾನತು
Update: 2023-04-21 21:07 IST
ಮಂಗಳೂರು : ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಭಾಗ ಸಂಖ್ಯೆ 105 ರ ಬೂತ್ ಮಟ್ಟದ ಅಧಿಕಾರಿಯನ್ನಾಗಿ ನಿಯೋಜಿಸಲಾಗಿದ್ದ ಪೆರ್ಲ ಅಂಗನವಾಡಿ ಕಾರ್ಯಕರ್ತೆ ಲತಾ ಕರ್ತವ್ಯ ನಿರ್ವಹಿಸದೆ ಅನಧಿಕೃತವಾಗಿ ಗೈರು ಹಾಜರಾದ ಕಾರಣ ಆಕೆಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಚುನಾವಣಾ ಕಾರ್ಯಗಳನ್ನು ನಿರ್ವಹಿಸುವಲ್ಲಿ ನಿರ್ಲಕ್ಷ್ಯ ವಹಿಸಿ, ಕರ್ತವ್ಯಲೋಪದೊಂದಿಗೆ ಚುನಾವಣಾ ಕಾರ್ಯಕ್ಕೂ ತೊಂದರೆ ಉಂಟು ಮಾಡಿದ್ದಾರೆ. ಹಾಗಾಗಿ ಪ್ರಜಾಪ್ರಾತಿನಿಧ್ಯ ಕಾಯ್ದೆ 1951ರ ಕಲಂ 134 ಉಲ್ಲಂಘನೆಯಡಿ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಅವರು ಲತಾರನ್ನು ತಕ್ಷಣದಿಂದ ಜಾರಿಗೆ ಬರುವಂತ ಅಮಾನತುಗೊಳಿಸಿ ಆದೇಶಿಸಿದ್ದಾರೆ.