ಭದ್ರಾವತಿ: ಚಾಕುವಿನಿಂದ ಇರಿದು ಯುವಕನ ಹತ್ಯೆ
Update: 2023-04-22 08:54 IST
ಭದ್ರಾವತಿ: ದುಷ್ಕರ್ಮಿಗಳ ತಂಡವೊಂದು ಯುವಕನೊಬ್ಬನಿಗೆ ಚಾಕುವಿನಿಂದ ಇರಿದು ಹತ್ಯೆಗೈದ ಘಟನೆ ಭದ್ರಾವತಿಯಲ್ಲಿ ನಡೆದಿದೆ.
ಮೃತ ಯುವಕನನ್ನು ಸಾಯಿನಗರ ನಿವಾಸಿಯಾದ ವಿನಯ್ ಕುಮಾರ್(25ವರ್ಷ) ಎನ್ನಲಾಗಿದೆ.
ಶುಕ್ರವಾರ ರಾತ್ರಿ 9 ಗಂಟೆ ವೇಳೆಗೆ ಈ ಘಟನೆ ನಡೆದಿದೆ ಎನ್ನಲಾಗಿದ್ದು, ದುಷ್ಕರ್ಮಿಗಳು ವಿನಯ್ ಕುಮಾರ್’ಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಇದರಿಂದ ಗಂಭೀರ ಗಾಯಗೊಂಡಿದ್ದ ವಿನಯ್ ನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಮೃತ ದೇಹವನ್ನು ತಾಲೂಕು ಸರಕಾರಿ ಆಸ್ಪತೆಗೆ ರವಾನಿಸಲಾಗಿದ್ದು, ಆಸ್ಪತ್ರೆ ಬಳಿಯಲ್ಲಿ ನೂರಾರು ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದು, ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಹೊಸಮನೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.