ಗುರುಪುರ ಬ್ಲಾಕ್ ಕಾಂಗ್ರೆಸ್ ಚುನಾವಣಾ ಪೂರ್ವಭಾವಿ ಸಭೆ: ಹಲವು ಬಿಜೆಪಿ ಮುಖಂಡರು "ಕೈ" ತೆಕ್ಕೆಗೆ

Update: 2023-04-22 07:31 GMT

ಗುರುಪುರ: ಗುರುಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಹೈಕಮಾಂಡ್ ಅಭ್ಯರ್ಥಿ ಘೋಷಣೆ ನಂತರ ಪ್ರಥಮ ಪೂರ್ವಭಾವಿ ಚುನಾವಣಾ ಸಭೆಯು ಕೈಕಂಬ ಮೇಘಾ ಪ್ಲಾಝಾ ಸಭಾಭವನದಲ್ಲಿ ಶುಕ್ರವಾರ ಸಂಜೆ ಜರುಗಿತು. 

ಚುನಾವಣಾ ಉಸ್ತುವಾರಿ ಪುರುಷೋತ್ತಮ ಚಿತ್ರಾಪುರ ಪ್ರಮುಖರಾಗಿ ಭಾಗವಹಿಸಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಕಾರ್ಯಕರ್ತರು ಪ್ರಾಮಾಣಿಕರಾಗಿ ದುಡಿಯುವಂತೆ ಕರೆ ಕೊಟ್ಟರು. 

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಚುನಾವಣೆಯಲ್ಲಿ ಕಾರ್ಯಕರ್ತರು ವಹಿಸಿಕೊಳ್ಳಬೇಕಾದ ಪಾತ್ರಗಳ ಬಗ್ಗೆ ಕೆಪಿಸಿಸಿ ಮಾಜಿ ಉಪಾಧ್ಯಕ್ಷ ಎಸ್.ವಿ. ಅಮೀನ್,  ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಅಬ್ದುಲ್ ಮಜೀದ್ ಸೂರಲ್ಪಾಡಿ, ಕೆಪಿಸಿಸಿ ಸದಸ್ಯರಾದ ಪೃಥ್ವಿರಾಜ್ ಆರ್. ಕೆ., ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಕೃಷ್ಣ ಅಮೀನ್, ಕರ್ನಾಟಕ ರಾಜ್ಯ ಧಾರ್ಮಿಕ ದತ್ತಿ ಪರಿಷತ್ ಮಾಜಿ ಸದಸ್ಯರಾದ ಪದ್ಮನಾಭ ಕೋಟ್ಯಾನ್ ಮಾತನಾಡಿದರು. ಸಭೆಯ ಅಧ್ಯಕ್ಷತೆಯನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುರೇಂದ್ರ ಕಂಬಳಿ ವಹಿಸಿದ್ದರು.

ಈ ಸಂದರ್ಭದಲ್ಲಿ ಜಿ.ಪಂ. ಮಾಜಿ ಸದಸ್ಯ ಯು.ಪಿ. ಇಬ್ರಾಹಿಂ ಅಡ್ಡೂರು, ಮಂಗಳೂರು ಉತ್ತರ ಪ್ರಚಾರ ಸಮಿತಿ ಅಧ್ಯಕ್ಷ ಗಿರೀಶ್ ಆಳ್ವ, ಮಂಗಳೂರು ಉತ್ತರ ಎನ್ ಎಸ್ ಯು ಐ ಅಧ್ಯಕ್ಷ ಅಮನ್ ಪೂಜಾರಿ, ಕಾಂಗ್ರೆಸ್ ಮುಖಂಡರಾದ ನೂರ್ ಮುಹಮ್ಮದ್, ಹಿರಿಯ ಕಾಂಗ್ರೆಸ್ ಮುಖಂಡರಾದ ಬಾಲಕೃಷ್ಣ, ಗುರುಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯಶವಂತ ಆಳ್ವ, ನೀರುಮಾರ್ಗ ಗ್ರಾ.ಪಂ. ಅಧ್ಯಕ್ಷ ಧನವಂತಿ, ಡಿ.ಸಿ.ಸಿ ಸದಸ್ಯ ಕಲ್ಲಾಡಿ ಅಬೂಬಕ್ಕರ್, ಬ್ಲಾಕ್ ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಭಾಷಾ ಗುರುಪುರ,  ಬ್ಲಾಕ್ ಕಿಸಾನ್ ಘಟಕದ ಅಧ್ಯಕ್ಷ‌ ವಿನಯ್ ಕುಮಾರ್ ಶೆಟ್ಟಿ, ಬ್ಲಾಕ್ ಕಾರ್ಮಿಕ ಘಟಕದ ಅಧ್ಯಕ್ಷ ಕೃಷ್ಣ ಬಂಗೇರಾ ಅಡ್ಯಪಾಡಿ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಮುಫೀದ್ ಅಡ್ಯಾರ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಪ್ರಮುಖರಾದ ಸಾರಿಕಾ ಪೂಜಾರಿ, ವಿನೋದ್ ಬಂಗೇರಾ ಕಾಜಿಲ, ಆನಂದ್ ಬಂಗೇರ ಕಾಜಿಲ ಇನಾಯತ್ ಅಲಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

Similar News