ಸಚಿವ ಆನಂದ್ ಸಿಂಗ್ ಸಹೋದರಿ ರಾಣಿ ಸಂಯುಕ್ತಾ ಸಿಂಗ್ ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆ
Update: 2023-04-22 17:50 IST
ಬೆಂಗಳೂರು: ಅರಣ್ಯ ಸಚಿವ ಆನಂದ್ ಸಿಂಗ್ ಸಹೋದರಿ, ರಾಜ್ಯ ಬಿಜೆಪಿ ಮಹಿಳಾ ಘಟಕದ ಉಪಾಧ್ಯಕ್ಷೆ ರಾಣಿ ಸಂಯುಕ್ತಾ ಹಿರಿಯ ನಾಯಕ ಜೈರಾಮ್ ರಮೇಶ್ ಹಾಗೂ ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಸಮ್ಮುಖದಲ್ಲಿ ಶನಿವಾರ ಕಾಂಗ್ರೆಸ್ ಗೆ ಸೇರ್ಪಡೆಯಾದರು.
ವಿಜಯನಗರದಲ್ಲಿ ಬಿಜೆಪಿ ಟಿಕೆಟ್ ತಪ್ಪಿದ ಹಿನ್ನೆಲೆ ರಾಣಿ ಸಂಯುಕ್ತಾ ಸಿಂಗ್ ಅಸಮಾಧಾನಗೊಂಡಿದ್ದರು. ಇಲ್ಲಿ ಸಚಿವ ಆನಂದಸಿಂಗ್ ಪುತ್ರ ಸಿದ್ದಾರ್ಥ್ ಸಿಂಗ್ ಗೆ ಬಿಜೆಪಿ ಟಿಕೆಟ್ ನೀಡಿದೆ.
ಕಳೆದ ರಾತ್ರಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಭೇಟಿಯಾಗಿ ಮಾತುಕತೆ ಮಾಡಿದ್ದರೆನ್ನಲಾಗಿದ್ದು, ಇಂದು ರಾಣಿ ಸಂಯುಕ್ತಾ ಸಿಂಗ್ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾದರು.