ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ: ಬಿ.ವೈ.ವಿಜಯೇಂದ್ರ

Update: 2023-04-22 13:17 GMT

ಮಂಡ್ಯ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಯಡಿಯೂರಪ್ಪನವರು ಈಗಾಗಲೇ ಸ್ವಇಚ್ಛೆಯಿಂದ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದಿದ್ದಾರೆ. ಅವರನ್ನು ರಾಜಕೀಯವಾಗಿ ಮುಗಿಸಲು ಬಿಜೆಪಿಯಲ್ಲಿ ಯಾರೂ ಪ್ಲ್ಯಾನ್ ಮಾಡಿಲ್ಲ. ಯಡ್ಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಎಲ್ಲಾ ಬಿಜೆಪಿ ನಾಯಕರು ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದಾರೆ'' ಎಂದರು.  

''ಬಿಜೆಪಿ ಸರ್ಕಾರ ರಾಜ್ಯದ ಜನರಿಗೆ ಸಾಮಾಜಿಕ ನ್ಯಾಯ ಕೊಡುವ ಕೆಲಸ ಮಾಡಿದೆ. ಕಾಂಗ್ರೆಸ್​ ಮೀಸಲಾತಿ ವಿಚಾರದಲ್ಲಿ ಕಣ್ಣೊರೆಸುವ ತಂತ್ರ ಅನುಸರಿಸುತ್ತಿದೆ'' ಎಂದು ದೂರಿದರು.

Similar News