ದ್ವಿತೀಯ ಪಿಯು ಪರೀಕ್ಷೆ: ದಾರುನ್ನೂರ್ ಸಂಸ್ಥೆಗೆ ಶೇ 100 ಫಲಿತಾಂಶ
Update: 2023-04-23 10:36 IST
ಮೂಡುಬಿದಿರೆ, ಎ.23: ಶಹೀದ್ ಸಿ.ಎಂ.ಅಬ್ದುಲ್ಲ ಮುಸ್ಲಿಯಾರ್ ಫೌಂಡೇಶನ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ದಾರುನ್ನೂರ್ ಎಜುಕೇಶನ್ ಸೆಂಟರ್ ಸಂಸ್ಥೆಯ ದ್ವಿತೀಯ ಪಿಯು ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆಯಲ್ಲಿ ಶೇ.100 ರ ಫಲಿತಾಂಶ ದಾಖಲಿಸಿದ್ದಾರೆ.
ಮೂವರು ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 12 ಮಂದಿ ಪ್ರಥಮ ಶ್ರೇಣಿ ಹಾಗೂ 5 ಮಂದಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಇದಲ್ಲದೆ ದಾರುಲ್ ಹುದಾ ವಿಶ್ವವಿದ್ಯಾನಿಲಯದ ಸೀನಿಯರ್ ಸೆಕೆಂಡರಿ ವಿಭಾಗದ ವಾರ್ಷಿಕ ಪರೀಕ್ಷೆಯಲ್ಲಿ ಭಾರತದ ವಿವಿಧ ರಾಜ್ಯಗಳಿಂದ 32 ಸಂಸ್ಥೆಯ ವಿದ್ಯಾರ್ಥಿಗಳಲ್ಲಿ ಉನ್ನತ ಶ್ರೇಣಿಯನ್ನು ಪಡೆದ 10 ಮಂದಿಯಲ್ಲಿ ದಾರುನ್ನೂರ್ ಸಂಸ್ಥೆಯ 3 ವಿದ್ಯಾರ್ಥಿಗಳು ಸೇರಿದ್ದಾರೆ ಎಂದು ಸಂಸ್ಥೆಯ ಪ್ರಾಂಶುಪಾಲ ಅಮೀನ್ ಹುದವಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.