×
Ad

ಮುಂಬೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಳಿ ಬಸ್‌ಗೆ ಟ್ರಕ್ ಢಿಕ್ಕಿ: 4 ಮಂದಿ ಸಾವು

Update: 2023-04-23 10:58 IST

ಮುಂಬೈ,: ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ರವಿವಾರ  ಟ್ರಕ್ ವೊಂದು  ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ ಹಾಗೂ  22 ಮಂದಿ ಗಾಯ ಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಂಬೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ದೇವಸ್ಥಾನದ ಬಳಿ ಮುಂಜಾನೆ 3:00 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ.

ಸತಾರಾದಿಂದ ಥಾಣೆಯ ಡೊಂಬಿವಿಲಿಗೆ ತೆರಳುತ್ತಿದ್ದ ಖಾಸಗಿ ಪ್ರಯಾಣಿಕರ ಬಸ್ ಸ್ವಾಮಿನಾರಾಯಣ ದೇವಸ್ಥಾನದ ಬಳಿ ತಲುಪುತ್ತಿದ್ದಂತೆ ಹಿಂದಿನಿಂದ ಬಂದ ಟ್ರಕ್ ಡಿಕ್ಕಿ ಹೊಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೂವರು ಬಸ್ ಪ್ರಯಾಣಿಕರು ಮತ್ತು ಟ್ರಕ್ ಚಾಲಕ ಸಾವನ್ನಪ್ಪಿದ್ದು, 22 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದರು.

ಮೇಲ್ನೋಟಕ್ಕೆ ಟ್ರಕ್ ಚಾಲಕನು ವಾಹನದ ಮೇಲೆ ನಿಯಂತ್ರಣ ಕಳೆದುಕೊಂಡು ಬಸ್‌ಗೆ ಡಿಕ್ಕಿ ಹೊಡೆದಿದ್ದಾನೆ.  ವೈದ್ಯಕೀಯ ತುರ್ತು ಸೇವಾ ತಂಡ ಸ್ಥಳಕ್ಕೆ ಧಾವಿಸಿ ಸಂತ್ರಸ್ತರಿಗೆ ನೆರವು ನೀಡಿದೆ ಎಂದು ಅಧಿಕಾರಿ ತಿಳಿಸಿದ್ದಾರೆ

ಗಾಯಗೊಂಡ 13 ಪ್ರಯಾಣಿಕರನ್ನು ನವಲೆ ಆಸ್ಪತ್ರೆ, ದೀನನಾಥ್ ಮಂಗೇಶ್ಕರ್ ಆಸ್ಪತ್ರೆ ಹಾಗೂ ಸಾಸೂನ್ ಆಸ್ಪತ್ರೆ ಸೇರಿದಂತೆ ಪುಣೆಯ ವಿವಿಧ ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಗಾಯಗೊಂಡ ಇತರ ಪ್ರಯಾಣಿಕರನ್ನು ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Similar News