ಕಾಂಗ್ರೆಸ್ ಅಭ್ಯರ್ಥಿ ಡಾ. ಜಿ ಪರಮೇಶ್ವರ್ ನಾಮಪತ್ರ ಸಲ್ಲಿಕೆ ವೇಳೆ ಕಲ್ಲು ತೂರಾಟ ಪ್ರಕರಣ: ಆರೋಪಿಯ ಬಂಧನ
Update: 2023-04-23 11:02 IST
ತುಮಕೂರು.ಎ.23: ಕೊರಟಗೆರೆ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಡಾ. ಜಿ ಪರಮೇಶ್ವರ್ ತಮ್ಮ ಸಾವಿರಾರು ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ನಡೆದ ಕಲ್ಲು ಎಸೆತ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಕೊರಟಗೆರೆ ಪೊಲೀಸರು ಬಂಧಿಸಿದ್ದಾರೆ.
ಕೊರಟಗೆರೆ ತಾಲೂಕಿನ ರೆಡ್ಡಿಹಳ್ಳಿ ವೆಂಕಟಾಪುರ ಗ್ರಾಮದ ರಂಗಧಾಮಯ್ಯ ಬಂಧಿತ ಆರೋಪಿಯಾಗಿದ್ದು, ಸದ್ಯ ಆರೋಪಿಯನ್ನು ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಘಟನೆಯಲ್ಲಿ ಮಹಿಳಾ ಪೊಲೀಸ್ ಪೇದೆಯೊಬ್ಬರು ಗಾಯಗೊಂಡಿದ್ದರು. ಆರೋಪಿಯು ಘಟನೆ ನಂತರ ಕಳೆದ ಮೂರು-ನಾಲ್ಕು ದಿನದಿಂದ ತಲೆಮರೆಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.