ಹುಬ್ಬಳ್ಳಿಗೆ ಆಗಮಿಸಿದ ರಾಹುಲ್ ಗಾಂಧಿ: ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡ ಜಗದೀಶ್ ಶೆಟ್ಟರ್
Update: 2023-04-23 12:38 IST
ಹುಬ್ಬಳ್ಳಿ, ಎ. 23: ಹುಬ್ಬಳ್ಳಿಗೆ ಆಗಮಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.
ಈ ವೇಳೆ ಶಾಸಕ ಪ್ರಸಾದ್ ಅಬ್ಬಯ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಕುಮಾರ್ ಪಾಟೀಲ್ ಸೇರಿ ಹಲವು ಕಾಂಗ್ರೆಸ್ ನಾಯಕರು ಸ್ವಾಗತಿಸಿದರು. ಬಳಿಕ ಜಗದೀಶ್ ಶೆಟ್ಟರ್ ಜೊತೆ ರಾಹುಲ್ ಗಾಂಧಿ ಕೆಲಕಾಲ ಮಾತುಕತೆ ನಡೆಸಿದರು.
ಬಳಿಕ ರಾಹುಲ್ ಗಾಂಧಿ ಹುಬ್ಬಳ್ಳಿಯಿಂದ ನೇರವಾಗಿ ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮಕ್ಕೆ ತೆರಳಿದ್ದಾರೆ.