ಪಣಂಬೂರು ಬೀಚ್‌ನಲ್ಲಿ ಯುವಕನ ಮೃತದೇಹ ಪತ್ತೆ

Update: 2023-04-23 12:16 GMT

ಸುರತ್ಕಲ್‌, ಎ.23: ಬೆಂಗಳೂರಿಗೆ ಹೋಗುವುದಾಗಿ ಮನೆಯಿಂದ ತೆರಳಿದ್ದ ಯುವಕನೋರ್ವ ಪಣಂಬೂರು ಬೀಚ್‌ನಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಬಂಟ್ವಾಳ ತಾಲೂಕಿನ ಮೊಡಂಕಾಪು ನಿವಾಸಿ ಉಷಾ ಎಂಬವರ ಮಗ ವಿನಯ್ (25) ಮೃತ ಯುವಕ ಎಂದು ಗುರುತಿಸಲಾಗಿದೆ.

ಮೃತದೇಹ ಪಣಂಬೂರು ಬೀಚ್ ನ ಬ್ರೇಕ್ ವಾಟರ್ ಬಳಿ ಪತ್ತೆಯಾಗಿದೆ ಎಂದು ತಿಳಿದು ಬಂದಿದ್ದು, ಪಣಂಬೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಘಟನೆಗೆ ಸಂಬಂಧಿಸಿ ಮೃತ ಯುವಕನ ತಾಯಿ ಪಣಂಬೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಕೊಲೆ ಶಂಕೆ ವ್ಯಕ್ತ ಪಡಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Similar News