×
Ad

ಶಿಂಧೆ ನೇತೃತ್ವದ ಮಹರಾಷ್ಟ್ರ ಸರ್ಕಾರ 15-20 ದಿನಗಳಲ್ಲೇ ಪತನಗೊಳ್ಳಲಿದೆ: ಸಂಜಯ್‌ ರಾವತ್‌

Update: 2023-04-23 17:48 IST

ಜಲಗಾಂವ್: ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರಕ್ಕೆ ‘ಡೆತ್ ವಾರೆಂಟ್’ ಹೊರಡಿಸಲಾಗಿದ್ದು, ಮುಂದಿನ 15-20 ದಿನಗಳಲ್ಲಿ ಅದು ಪತನವಾಗಲಿದೆ ಎಂದು ಶಿವಸೇನೆ ನಾಯಕ ಸಂಜಯ್ ರಾವತ್ ರವಿವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ರಾವತ್, ತಮ್ಮ ಪಕ್ಷವು ನ್ಯಾಯಾಲಯದ ಆದೇಶಕ್ಕಾಗಿ ಕಾಯುತ್ತಿದ್ದು, ನ್ಯಾಯ ಸಿಗುತ್ತದೆ ಎಂದು ನಿರೀಕ್ಷಿಸುತ್ತಿದೆ ಎಂದು ಹೇಳಿದ್ದಾರೆ. 

ಠಾಕ್ರೆ ನಾಯಕತ್ವದ ವಿರುದ್ಧ ಬಂಡಾಯವೆದ್ದ 16 ಶಿವಸೇನೆಯ (ಶಿಂಧೆ ಪಕ್ಷದ) ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ಬಗ್ಗೆ ರಾವತ್‌ ಮಾತನಾಡಿದ್ದಾರೆ.

"ಈಗಿರುವ ಮುಖ್ಯಮಂತ್ರಿ ಮತ್ತು ಅವರ 40 ಶಾಸಕರ ಸರ್ಕಾರ 15-20 ದಿನಗಳಲ್ಲಿ ಪತನವಾಗಲಿದೆ. ಈ ಸರ್ಕಾರದ ಡೆತ್ ವಾರಂಟ್ ಹೊರಡಿಸಲಾಗಿದೆ. ಅದಕ್ಕೆ ಯಾರು ಸಹಿ ಹಾಕುತ್ತಾರೆ ಎಂಬುದು ಈಗ ನಿರ್ಧರಿಸಬೇಕಿದೆ" ಎಂದು ರಾವತ್ ಹೇಳಿದ್ದಾರೆ.

ಕಳೆದ ವರ್ಷ ಜೂನ್‌ನಲ್ಲಿ, ಶಿಂಧೆ ಮತ್ತು 39 ಶಾಸಕರು ಶಿವಸೇನೆ ನಾಯಕತ್ವದ ವಿರುದ್ಧ ಬಂಡಾಯವೆದ್ದಿದ್ದರು, ಇದರ ಪರಿಣಾಮವಾಗಿ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರದ ಪತನವಾಗಿತ್ತು.

Similar News