ಯುವಜನತೆಗೆ ಉಗ್ಯೋಗದ ಬಾಗಿಲು ತೆರೆಯುವುದು ಇಂದಿನ ಅಗತ್ಯ: ಪ್ರಸಾದ್‌ರಾಜ್ ಕಾಂಚನ್
ಉಡುಪಿ: 18 ವರ್ಷದವರಿಗೆ ಮತದಾನ ಮಾಡುವ ಅವಕಾಶವನ್ನು ಆಗಿನ ಪ್ರಧಾನಿ ರಾಜೀವ್ ಗಾಂಧಿ ನೀಡಿದ್ದರು. ಬಿಜೆಪಿ ಸರಕಾರದಿಂದ ಜನರಿಗೆ ಆಗುತ್ತಿರುವ ತೊಂದರೆಯನ್ನು ಯುವ ಸಮುದಾಯ ಅರ್ಥ ಮಾಡಿ ಕೊಳ್ಳಬೇಕು ಎಂದು ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್‌ರಾಜ್ ಕಾಂಚನ್ ಹೇಳಿದ್ದಾರೆ.
ಉಡುಪಿ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಕಾಂಗ್ರೆಸ್ ಭವನದಲ್ಲಿ ಇಂದು ನಡೆದ ಯುವ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡುತಿ ದ್ದರು. ಯುವಕರಿಗಿಂದು ಉದ್ಯೋಗವಿಲ್ಲ. ಪಾರದರ್ಶಕ ಆಡಳಿತ ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ. ಯುವಜನತೆಗೆ ಉಗ್ಯೋಗದ ಬಾಗಿಲು ತೆರೆಯಬೇಕಾ ಗಿದೆ. ಕಾಂಗ್ರೆಸ್ ಹಲವು ಇಂಜಿನಿಯರಿಂಗ್ ಕಾಲೇಜುಗಳನ್ನು ಸ್ಥಾಪಿಸಿದೆ. ಕಾಂಗ್ರೆಸ್ ಯುವಜನರಿಗೆ ಸಾಕಷ್ಟು ಅವಕಾಶ ನೀಡಿದೆ ಎಂದರು.
ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ದೀಪಕ್ ಕೋಟ್ಯಾನ್, ಪ್ರಚಾರ ಸಮಿತಿ ಅಧ್ಯಕ್ಷ ಹರೀಶ್ ಕಿಣಿ, ಯುವ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿರಾಜ್, ಜಿಪಂ ಮಾಜಿ ಸದಸ್ಯ ದಿವಾಕರ್ ಕುಂದರ್, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರೀತಿ ಸಾಲಿನ್ಸ್, ಉಡುಪಿ ಜಿಲ್ಲಾ ಯುವ ಕಾಂಗ್ರೆಸ್‌ನ ಸುರಯ್ಯಾ ಅಂಜುಮ್, ಎನ್‌ಯುಎಸ್‌ಐ ಅಧ್ಯಕ್ಷ ಸೌರಭ್ ಬಲ್ಲಾಳ್, ಉಡುಪಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಮತಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.