×
Ad

ಚುನಾವಣೆಯಲ್ಲಿ ಸಂಬಂಧಿಗಳ ಸ್ಪರ್ಧೆ: ದಾವಣಗೆರೆ ಎಸ್ಪಿ ಸೇರಿ ಇಬ್ಬರು ಐಪಿಎಸ್ ಅಧಿಕಾರಿಗಳ ವರ್ಗಾವಣೆ

Update: 2023-04-23 21:47 IST

ಬೆಂಗಳೂರು, ಎ. 23: ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅವರ ಹೆಸರಿನ ಮುಂದಿನ ಸೂಚಿತ ಸ್ಥಳಕ್ಕೆ ನಿಯೋಜನೆಗೊಳ್ಳುವಂತೆ ವರ್ಗಾವಣೆ ಮಾಡಿ ರಾಜ್ಯ ಸರಕಾರ ರವಿವಾರ ಆದೇಶ ಹೊರಡಿಸಿದೆ. 

ಬೆಂಗಳೂರಿನ ವೈಟ್​​ಫೀಲ್ಡ್​​​ ಡಿಸಿಪಿ ಗಿರೀಶ್​ ಮತ್ತು ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಅವರನ್ನು​​ ವರ್ಗಾವಣೆ ಮಾಡಲಾಗಿದೆ.  

ಬೆಂಗಳೂರಿನ ವಿಧಿ ವಿಜ್ಞಾನ ಪ್ರಯೋಗಾಲಯದ ಪೊಲೀಸ್ ವರಿಷ್ಠಾಧಿಕಾರಿ(ಎಸ್ಪಿ)ಯಾಗಿದ್ದ ಧರ್ಮೇಂದ್ರ ಕುಮಾರ್ ಮೀನಾ ಅವರನ್ನು ಉಪ ಪೊಲೀಸ್ ಆಯುಕ್ತ(ಡಿಸಿಪಿ) ವೈಟ್‍ಫಿಲ್ಡ್ ಬೆಂಗಳೂರು, ಕಲಬುರಗಿ ಪೊಲೀಸ್ ತರಬೇತಿ ಶಾಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಡಾ.ಅರುಣ್ ಅವರನ್ನು ದಾವಣಗೆರೆ ಪೊಲೀಸ್ ವರಿಷ್ಟಾಧಿಕಾರಿ(ಎಸ್ಪಿ)ಯನ್ನಾಗಿ ವರ್ಗಾವಣೆ ಮಾಡಲಾಗಿದೆ.

‘ಮೇಲ್ಕಂಡ ಆದೇಶದಲ್ಲಿ ಉಲ್ಲೇಖಿತ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು, ಅವರ ನೇರ ಸಂಬಂಧಿಗಳು ವಿಧಾನಸಭೆ ಚುನಾವಣೆಯಲ್ಲಿ ಅದೇ ಜಿಲ್ಲಾ ವ್ಯಾಪ್ತಿಯ ಕ್ಷೇತ್ರಗಳ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿರುವ ಹಿನ್ನಲೆಯಲ್ಲಿ ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ವರ್ಗಾವಣೆಯ ಕ್ರಮಕೈಗೊಳ್ಳಲಾಗಿದೆ’ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಸ್ಪಷ್ಟನೆ ನೀಡಿದ್ದಾರೆ.

Similar News