ಬೆಂಗಳೂರು: ಡೆತ್‌ನೋಟ್ ಬರೆದಿಟ್ಟು ಆಸ್ಪತ್ರೆ ವಾರ್ಡ್ ನಲ್ಲೇ ಆತ್ಮಹತ್ಯೆ ಮಾಡಿಕೊಂಡ ವೈದ್ಯ

Update: 2023-04-23 16:51 GMT

ಬೆಂಗಳೂರು, ಎ.23: ಅನಾರೋಗ್ಯದಿಂದ ಬಳಲುತ್ತಿದ್ದ ವೈದ್ಯ ಬೆಂಗಳೂರಿನ ಸರಕಾರಿ ಆಸ್ಪತ್ರೆ ವಾರ್ಡ್ ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.

ಆತ್ಮಹತ್ಯೆ ಮಾಡಿಕೊಂಡ ವೈದ್ಯರನ್ನು ಡಾ.ಎಸ್.ರೇಣುಕಾನಂದ(43) ಎಂದು ಗುರುತಿಸಲಾಗಿದ್ದು, ಇವರು ಜಯನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. 

ಮಕ್ಕಳ ತಜ್ಞರಾಗಿದ್ದ ವೈದ್ಯ ಡಾ.ಎಸ್.ರೇಣುಕಾನಂದ ಅವರು ಆಸ್ಪತ್ರೆಯ ವಾರ್ಡ್ನಲ್ಲಿ ರವಿವಾರ ಮಧ್ಯಾಹ್ನ 3 ಗಂಟೆ ಸಮಯದಲ್ಲಿ ಬೆಡ್‌ಶೀಟ್‌ನಿಂದ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರೇಣುಕಾನಂದ ಬಾಲ್ಯದಿಂದಲೇ ಪೋಲಿಯೋದಿಂದ ಅಂಗವೈಕಲ್ಯತೆ ಹೊಂದಿದ್ದರು. ಹೀಗಾಗಿ ಹಲವು ದಿನಗಳಿಂದ ಕಣ್ಣಿನ ಸಮಸ್ಯೆಯಿಂದ ಬಳಲುತ್ತಿದ್ದರು. ಇದರಿಂದ ಬೇಸತ್ತಿದ್ದರು ಎನ್ನಲಾಗಿದೆ.

ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ತಿಲಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News