ಕಾರ್ಕಳ: ಬಿಜೆಪಿ, ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ
Update: 2023-04-23 23:44 IST
ಕಾರ್ಕಳ: ಪಳ್ಳಿ -ನಿಂಜೂರಿನಲ್ಲಿ ನಡೆದ ಕಾಂಗ್ರೆಸ್ ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಅಭಿನಂದನ್ ಶೆಟ್ಟಿ ಹಾಗೂ ಜಗದೀಶ್ ಪೂಜಾರಿ ಇವರ ಮುಂದಾಳತ್ವದಲ್ಲಿ ಬಿಜೆಪಿ ಮತ್ತು ಹಲವಾರು ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡ 106 ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು.
ಅಭಿನಂದನ್ ಶೆಟ್ಟಿರವರ ನಿವಾಸದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾರ್ಕಳದ ಕಾಂಗ್ರೆಸ್ ಅಭ್ಯರ್ಥಿ ಉದಯ್ ಶೆಟ್ಟಿ ಮತ್ತು ಕಾಂಗ್ರೆಸ್ ಮುಖಂಡರಾದ ನೀರೇ ಕೃಷ್ಣ ಶೆಟ್ಟಿ, ಸಹನಾ ಸುರೇಂದ್ರ ಶೆಟ್ಟಿ, ಕಾಂತಾವರ ಉದಯ್ ಶೆಟ್ಟಿ, ಸುಪ್ರೀತ್ ಶೆಟ್ಟಿ, ಸುಧಾಕರ್ ಕೋಟ್ಯಾನ್, ವಿಶ್ವನಾಥ್ ಭಂಡಾರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಪಕ್ಷದ ಹಿರಿಯರು ಮತ್ತು ಪಳ್ಳಿ- ನಿಂಜೂರ್ರಿನ ಪಕ್ಷದ ಕಾರ್ಯಕರ್ತರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.