×
Ad

ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿದ್ದ ಪಿಐಎಲ್ ಇತ್ಯರ್ಥ

Update: 2023-04-24 23:33 IST

ಬೆಂಗಳೂರು, ಎ.24: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ ಮಾ.24ರಂದು ಮುಷ್ಕರ ನಡೆಸಲು ಮುಂದಾಗಿದ್ದ ರಾಜ್ಯ ಸಾರಿಗೆ ನಿಗಮಗಳ ನೌಕರರ ಸಮಾನ ಮನಸ್ಕರ ವೇದಿಕೆ ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಪಡಿಸಿದೆ. 

ಮುಷ್ಕರನ್ನು ಪ್ರಶ್ನಿಸಿ ಹೆಚ್.ಎಂ.ವೆಂಕಟೇಶ್ ಎಂಬುವವರು ಹೈಕೋರ್ಟ್‍ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ವಕೀಲರ ವಾದವನ್ನು ಆಲಿಸಿದ ನ್ಯಾಯಪೀಠವು ಅರ್ಜಿಯನ್ನು ಇತ್ಯರ್ಥಪಡಿಸಿದೆ. 

ಮಾರ್ಚ್ 21ರಂದೇ ಪ್ರತಿಭಟನೆ ನಡೆಸಲು ಸಾರಿಗೆ ನೌಕರರು ಮುಂದಾಗಿದ್ದರು. ಈ ವೇಸಾರಿಗೆ ನೌಕರರಳೆ ರಾಜ್ಯ ಸರಕಾರ ಶೇಕಡ 15ರಷ್ಟು ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿತ್ತು. ಹೀಗಾಗಿ ಮುಷ್ಕರ ಹಿಂಪಡೆಯಲಾಗಿತ್ತು. ಆದರೆ, ಮತ್ತೆ ಸಮಾನ ಮನಸ್ಕರ ವೇದಿಕೆ ಸಾರಿಗೆ ಮುಷ್ಕರಕ್ಕೆ ಕರೆ ನೀಡಿತ್ತು. ಸಾರಿಗೆ ನೌಕರರ ಮುಖಂಡ ಚಂದ್ರು ನಾಲ್ಕು ನಿಗಮದ ಬಸ್‍ಗಳನ್ನ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲು ಕರೆ ನೀಡಿದ್ದರು.

Similar News