×
Ad

ಎ. 27: ದ.ಕ. ಜಿಲ್ಲೆಗೆ ರಾಹುಲ್ ಗಾಂಧಿ ಭೇಟಿ

Update: 2023-04-25 18:10 IST

ಮಂಗಳೂರು: ಎಐಸಿಸಿ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ದಕ್ಷಿಣ ಕನ್ನಡ ಜಿಲ್ಲೆಗೆ ಎಪ್ರಿಲ್ 27ರಂದು ಆಗಮಿಸಲಿದ್ದಾರೆ.

ಅಂದು ಸಂಜೆ 3 ಗಂಟೆಗೆ ಮಂಗಳೂರು ನಗರ ಹೊರವಲಯದ ಅಡ್ಯಾರ್‌ ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ಎದುರಿನ ಮೈದಾನದಲ್ಲಿ ಹಮ್ಮಿಕೊಂಡಿರುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮಂಗಳೂರು ನಗರದಲ್ಲಿ ರೋಡ್ ಶೋ ಇರುವುದಿಲ್ಲ ಎಂದು ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

Similar News