ಸಿದ್ದರಾಮಯ್ಯ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿಕೆ
Update: 2023-04-25 22:25 IST
ಬೆಂಗಳೂರು, ಎ.25: ಕರ್ನಾಟಕ ವಿಧಾನಸಭೆ ಚುನಾವಣೆ ಸಮಯದಲ್ಲೇ ಲಿಂಗಾಯತರ ವಿರುದ್ಧ ಹೇಳಿಕೆ ನೀಡಿದ ಆರೋಪ ಸಂಬಂಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ಹೂಡಲಾಗಿದೆ.
ಶಂಕರ್ ಶೇಟ್ ಎಂಬುವರು ನಗರದ ಮ್ಯಾಜಿಸ್ಟ್ರೇಟ್ ಕೋರ್ಟ್‍ಗೆ ಮಂಗಳವಾರ ಖಾಸಗಿ ದೂರು ನೀಡಿದ್ದಾರೆ. ದೂರು ಸ್ವೀಕರಿಸಿದ ಕೋರ್ಟ್ ವಿಚಾರಣೆಯನ್ನು ಎ.29ಕ್ಕೆ ಮುಂದೂಡಿದೆ.
ಲಿಂಗಾಯತರ ಬಗ್ಗೆ ಹೇಳಿಕೆ ನೀಡಿದ ಬೆನ್ನಲ್ಲೇ ಲಿಂಗಾಯತ ಯುವ ವೇದಿಕೆಯ ಕಾನೂನು ಘಟಕವು ಸಿದ್ದರಾಮಯ್ಯ ವಿರುದ್ಧ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಇದೀಗ ಮಾನನಷ್ಟ ಮೊಕದ್ದಮೆ ಕೂಡ ದಾಖಲಾಗಿದೆ.