×
Ad

ಬೆಂಗಳೂರು | ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆ ; 160 ಮಂದಿ ಸೆರೆ, 62 ಲಕ್ಷ ಜಪ್ತಿ

Update: 2023-04-25 23:36 IST

ಬೆಂಗಳೂರು, ಎ.25: ಐಪಿಎಲ್ ಕ್ರಿಕೆಟ್ ಪಂದ್ಯಗಳ ಮೇಲೆ ಬೆಟ್ಟಿಂಗ್ ಕಟ್ಟಿ ದಂಧೆ ನಡೆಸುತ್ತಿದ್ದ ಜಾಲ ಪತ್ತೆ ಹಚ್ಚಿರುವ ಸಿಸಿಬಿ ಪೊಲೀಸರು 30ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿ 160 ಮಂದಿಯನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಬಂಧಿತ ಆರೋಪಿಗಳಿಂದ 62 ಲಕ್ಷ ರೂ. ವಶಕ್ಕೆ ಪಡೆದು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ ಡಾ.ಎಸ್.ಡಿ.ಶರಣಪ್ಪ ಅವರು ತಿಳಿಸಿದ್ದಾರೆ.

ಬೆಟ್ಟಿಂಗ್ ದಂಧೆ ಸಂಬಂಧ ನಗರದ ಹಲವು ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದು, ಇನ್ನೂ ಹಲವು ಗ್ಯಾಂಬ್ಲರ್ ಗಳ ಮೇಲೆ ಸಿಸಿಬಿ ಪೊಲೀಸರು ನಿಗಾ ಇಟ್ಟಿದ್ದಾರೆ. ಐಪಿಎಲ್ ಪಂದ್ಯ ನಡೆಯುವ ದಿನ ಆನ್‍ಲೈನ್ ಮತ್ತು ವಿವಿಧ ಆ್ಯಪ್‍ಗಳ ಮೂಲಕ ಲಕ್ಷಾಂತರ ರೂಪಾಯಿ ಬೆಟ್ಟಿಂಗ್ ಕಟ್ಟುತ್ತಿದ್ದರು. ಈ ಬಗ್ಗೆ ಮಾಹಿತಿ ತಿಳಿದ ಸಿಸಿಬಿ ಪೊಲೀಸರು, ವಿವಿಧ ಠಾಣೆಗಳಲ್ಲಿ ಒಟ್ಟು 35 ಪ್ರಕರಣಗಳನ್ನು ದಾಖಲಿಸಿ ತನಿಖೆಗೆ ಆರಂಭಿಸಿದ್ದರು

ಅದರಂತೆ ದಂಧೆಯಲ್ಲಿ ತೊಡಗಿದ್ದ 160 ಮಂದಿಯ ಸಹಿತ ಬೆಟ್ಟಿಂಗ್‍ಗೆ ಬಳಕೆ ಮಾಡಿದ್ದ 62 ಲಕ್ಷ ರೂ. ನಗದನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಅವರು ಹೇಳಿದ್ದಾರೆ.

Similar News