×
Ad

ಚುನಾವಣಾ ಪ್ರಚಾರದಲ್ಲಿ ಬಾಲಕಿ: ಕೇಂದ್ರ ಸಚಿವರ ಸಮ್ಮುಖದಲ್ಲೇ ನೀತಿ ಸಂಹಿತೆ ಉಲ್ಲಂಘಿಸಿದ ಬಿಜೆಪಿ ಅಭ್ಯರ್ಥಿ

Update: 2023-04-26 13:32 IST

ಕಲಬುರಗಿ: ಕೇಂದ್ರ ಸಚಿವರ ಸಮ್ಮುಖದಲ್ಲೇ ಬಿಜೆಪಿ ಅಭ್ಯರ್ಥಿಯೊಬ್ಬರು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗಂವ್ಹಾರ ಗ್ರಾಮದಲ್ಲಿ ನಡೆದಿದೆ.

ಚುನಾವಣಾ ಪ್ರಚಾರದ ವೇಳೆ ಬಿಜೆಪಿ ಅಭ್ಯರ್ಥಿ ಶಿವರಾಜ್ ಪಾಟೀಲ್ ಪರವಾಗಿ ಚಿಕ್ಕ ಮಗುವಿನ ಮೂಲಕ ಮತ ಪ್ರಚಾರ ಮಾಡಲಾಗಿದೆ. ಆ ಮೂಲಕ ಬಿಜೆಪಿ ಅಭ್ಯರ್ಥಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಪ್ರಚಾರ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ಭಾಗಿಯಾಗಿದ್ದರು. 

ಬಿಜೆಪಿ ನಾಯಕ ವಿರುದ್ಧ ಕ್ರಮಕ್ಕೆ ಆಗ್ರಹ

'ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಸುವಂತಿಲ್ಲ ಎಂಬ ನಿಯಮವಿದೆ. ಆದರೆ, ಬಿಜೆಪಿ ನಾಯಕರು ವೇದಿಕೆ ಮೇಲೆ ಅಭ್ಯರ್ಥಿ ಶಿವರಾಜ್ ಪಾಟೀಲ್ ಗೆ ಮತ ಹಾಕಿ ಗೆಲ್ಲಿಸುವಂತೆ ಮಗುವಿನ ಮೂಲಕ ಹೇಳಿಸಿದ್ದಾರೆ' ಎಂದು ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಅಲ್ಲದೇ,  ಬಿಜೆಪಿ ನಾಯಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗದ ಅಧಿಕಾರಿಗಳನ್ನು ಜನರು ಒತ್ತಾಯಿಸಿದ್ದಾರೆ.  

Similar News