×
Ad

ರಾಹುಲ್ ಗಾಂಧಿ ರಕ್ತದ ಬಗ್ಗೆ ನಮಗೆ ಸಂಶಯವಿದೆ: ನಳಿನ್ ಕುಮಾರ್ ಕಟೀಲ್

Update: 2023-04-26 17:24 IST

ಗದಗ, ಎ.26: 'ನಮಗೆ ಈಗ ರಾಹುಲ್ ಗಾಂಧಿ ರಕ್ತದ ಬಗ್ಗೆ ಸಂಶಯವಿದೆ' ಎಂದು ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. 

ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಟೀಲ್, 'ಬಿಜೆಪಿ, ಆರೆಸ್ಸೆಸ್ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿಲ್ಲ' ಎಂಬ ರಾಹುಲ್ ಗಾಂಧಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದರು. 

'ರಾಹುಲ್ ಯಾವ ಹೋರಾಟ ಮಾಡಿದ್ದಾರೆ ಹೇಳಲಿ. ಗಾಂಧಿ ಅಂತಾ ಹೆಸರು ಹೇಗೆ ಬಂದು ಅಂತಾ ಮೊದಲು ಹೇಳಲಿ, ಆಮೇಲೆ ನಾನು ಉತ್ತರ ಕೊಡುತ್ತೇನೆ' ಎಂದು ಹೇಳಿದರು. 

'ಹಿಂದಿನಿಂದಲೂ ಗದಗ ಕ್ಷೇತ್ರದಲ್ಲಿ ಗೂಂಡಾಗಿರಿ ಪ್ರವೃತ್ತಿ ಮಿತಿಮೀರಿದೆ. ಕಳೆದ ಕೆಲ ದಿನಗಳ ಹಿಂದೆ ನಾಮಪತ್ರ ಸಲ್ಲಿಸುವ ವೇಳೆ ನಮ್ಮ ಅಭ್ಯರ್ಥಿ ಅನಿಲ್ ಮೆಣಸಿನಕಾಯಿ ಅವರ ಮೇಲೆ ಹಲ್ಲೆಗೆ ಯತ್ನ ನಡೆಸಿರುವುದು ಕಾಂಗ್ರೆಸ್ ನ ಗೂಂಡಾಗಿರಿ ಪ್ರವೃತ್ತಿ ತಿಳಿಯುತ್ತದೆ. ಈ ಬಾರಿ ಚುನಾವಣೆಯಲ್ಲಿ ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ದಾಖಲಿಸುತ್ತದೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿಅತಂತ್ರ ಫಲಿತಾಂಶ ಬಂದರೆ ಸಿಎಂ ಆಗ್ತೇನೆ ಎಂದು ಒಬ್ಬರು ಕಾದು ಕುಳಿತಿದ್ದಾರೆ: ಎಚ್‌ಡಿಕೆ ಕಾಲೆಳೆದ ಸಂಸದೆ ಸುಮಲತಾ 

Similar News