×
Ad

ನಾಡದೋಣಿ ಮೀನುಗಾರಿಕೆ 1488ಕೆಎಲ್ ಸೀಮೆಎಣ್ಣೆ ಬಿಡುಗಡೆ: ಯಶ್ಪಾಲ್ ಸುವರ್ಣ ಅಭಿನಂದನೆ

Update: 2023-04-26 20:25 IST

ಉಡುಪಿ, ಎ.26: ಕರಾವಳಿ ಜಿಲ್ಲೆಗಳ ನಾಡದೋಣಿ ಮೀನುಗಾರರ ಮನವಿಗೆ ಸ್ಪಂದಿಸಿ 1488  ಕಿಲೋ ಲೀಟರ್ ಸೀಮೆಎಣ್ಣೆ ಬಿಡುಗಡೆ ಮಾಡಿದ ಕೇಂದ್ರ ಸರಕಾರಕ್ಕೆ ಸಮಸ್ತ ಮೀನುಗಾರರ ಪರವಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್‌ಪಾಲ್ ಸುವರ್ಣ ಅಭಿನಂದನೆ ಸಲ್ಲಿಸಿದ್ದಾರೆ.

ಮೀನುಗಾರಿಕೆ ಇಲಾಖೆ ಕಳೆದ ಸಾಲಿನಲ್ಲಿ ನಾಡದೋಣಿ ಮೀನುಗಾರಿಕೆಗೆ ಸೀಮೆಎಣ್ಣೆಯನ್ನು 150 ಲೀಟರ್‌ನಿಂದ 300 ಲೀಟರ್‌ಗೆ ಹೆಚ್ಚಿಸಲು ಸಮ್ಮತಿಸಿದ್ದು, ಇದೀಗ ಕೇಂದ್ರ ಸರಕಾರ ಸೀಮೆ ಎಣ್ಣೆಯನ್ನು ಬಿಡುಗಡೆಗೊಳಿಸುವ ಮೂಲಕ ನಾಡದೋಣಿ ಮೀನುಗಾರಿಕೆಗೆ ಸಹಕಾರ ನೀಡಿದೆ ಎಂದು ಅವರು ತಿಳಿಸಿದ್ದಾರೆ.

ಕೇಂದ್ರ ಸರಕಾರದ ಮೂಲಕ ಸೀಮೆಎಣ್ಣೆ ಬಿಡುಗಡೆಗೆ ವಿಶೇಷ ಮುತುವರ್ಜಿ ವಹಿಸಿದ ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ, ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್, ಸಂಸದ  ಬಿ.ವೈ.ರಾಘವೇಂದ್ರ ಹಾಗೂ ಕರಾವಳಿ ಜಿಲ್ಲೆಯ ಎಲ್ಲಾ ಶಾಸಕರಿಗೆ ಮೀನು ಗಾರರ ಪರವಾಗಿ ಅವರು ಪ್ರಕಟಣೆಯಲ್ಲಿ ಧನ್ಯವಾದ ಸಲ್ಲಿಸಿದ್ದಾರೆ. 

Similar News