ಶ್ಯಾಮಿಲಿ ಪಿಯು ಕಾಲೇಜಿಗೆ ಶೇ.98.6 ಫಲಿತಾಂಶ
Update: 2023-04-26 21:01 IST
ಉಡುಪಿ, ಎ.26: ಡಾ. ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್‌ನ ಆಡಳಿತದಲ್ಲಿರುವ ಶ್ಯಾಮಿಲಿ ಪದವಿ ಪೂರ್ವ ಕಾಲೇಜಿನ 208 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದು, 205 ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇ. 98.6 ಫಲಿತಾಂಶ ಪಡೆದಿದೆ.
ಉತ್ತೀರ್ಣರಾದ 205 ವಿದ್ಯಾರ್ಥಿಗಳಲ್ಲಿ 74 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 116 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ 12 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾದ ಅನುಶ್ರೀ ಉಮೇಶ್ ಬೋರ್ಕರ್ 587 ಅಂಕಗಳನ್ನು ಗಳಿಸಿ ರಾಜ್ಯಕ್ಕೆ 10ನೇ ಸ್ಥಾನ ಪಡೆದಿದ್ದಾರೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.