'ಒಂದೇ ಒಂದು ಬಾರಿ ಅವಕಾಶ ಮಾಡಿಕೊಡಿ': ವೇದಿಕೆಯಲ್ಲೇ ಕಣ್ಣೀರಿಟ್ಟ ಬಬಲೇಶ್ವರ ಬಿಜೆಪಿ ಅಭ್ಯರ್ಥಿ ವಿಜುಗೌಡ ಪಾಟೀಲ್
ವಿಜಯಪುರ: ರಾಜ್ಯದಲ್ಲಿ ಮತದಾನ ದಿನ ಹತ್ತಿರವಾಗುತ್ತಿದ್ದಂತೆ ವಿವಿಧ ರಾಜಕೀಯ ಪಕ್ಷಗಳ ಘಟಾನುಘಟಿಗಳು ಪ್ರಚಾರದಲ್ಲಿ ತೊಡಗಿದ್ದಾರೆ. ಈ ಮಧ್ಯೆ 'ಒಂದು ಬಾರಿ ನಿಮ್ಮ ಸೇವೆ ಮಾಡಲು ಅವಕಾಶ ಮಾಡಿಕೊಡಿ' ಎಂದು ಬಿಜೆಪಿ ಅಭ್ಯರ್ಥಿಯೊಬ್ಬರು ಕಣ್ಣೀರಿಟ್ಟ ಘಟನೆ ಜಿಲ್ಲೆಯ ಬಬಲೇಶ್ವರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕನಮಡಿ ಗ್ರಾಮದಲ್ಲಿ ನಡೆದಿದೆ.
ಬುಧವಾರ ಬಿಜೆಪಿಯ ಅಭ್ಯರ್ಥಿ ವಿಜುಗೌಡ ಪಾಟೀಲ್ ಅವರು ಗ್ರಾಮದ ಪ್ರಚಾರ ಸಭೆಯಲ್ಲಿ ಕಣ್ಣೀರಿಡುತ್ತಾ, ''ಒಂದೇ ಒಂದು ಬಾರಿ ತಮ್ಮ ಸೇವೆ ಮಾಡಲು ಶಾಸಕ ಸ್ಥಾನಕ್ಕೆ ಆಯ್ಕೆ ಮಾಡಿ'' ಮತದಾರರನ್ನು ಕೇಳಿಕೊಂಡಿದ್ದಾರೆ.
ಕಳೆದ ಎರಡು ಬಾರಿ ಬಬಲೇಶ್ವರ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ವಿಜುಗೌಡ ಪಾಟೀಲ್ 2018ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ 68,624 ಮತಗಳನ್ನು ಪಡೆದು ಕಾಂಗ್ರೆಸ್ ಅಭ್ಯರ್ಥಿ ಎಂ.ಬಿ ಪಾಟೀಲ್ ವಿರುದ್ಧ ಸೋಲು ಅನುಭವಿಸಿದ್ದರು.
ಈ ಬಾರಿಯೂ ಕಾಂಗ್ರೆಸ್ ಅಭ್ಯರ್ಥಿ ಎಂ.ಬಿ ಪಾಟೀಲ್ ವಿರುದ್ಧ ವಿಜುಗೌಡ ಪಾಟೀಲ್ ಬಿಜೆಪಿಯಿಂದ ಕಣಕ್ಕಿಳಿದಿದ್ದಾರೆ.