×
Ad

ಶಿವಮೊಗ್ಗ | ಸಿಗಂದೂರಿಗೆ ತೆರಳುತ್ತಿದ್ದ ಪ್ರವಾಸಿಗರಿದ್ದ ಬಸ್‌ ಪಲ್ಟಿ: 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

Update: 2023-04-27 10:48 IST

ಶಿವಮೊಗ್ಗ: ಸಿಗಂದೂರಿಗೆ ತೆರಳುತ್ತಿದ್ದ ಪ್ರವಾಸಿಗರಿದ್ದ ಖಾಸಗಿ ಬಸ್‌ ಒಂದು ಶಿವಮೊಗ್ಗದ ನಿದಿಗೆ ಬಳಿ ಪಲ್ಟಿಯಾಗಿ 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಗುರುವಾರ ನಡೆದಿದೆ. 

ನಿದಿಗೆ ಕೆರೆ ಬಳಿ ರಸ್ತೆ ಕಾಮಗಾರಿ ನಡೆಯುತ್ತಿದ್ದು, ವೇಗವಾಗಿ ಬಂದ ಖಾಸಗಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ. ಬೆಳಗಿನ ಜಾವ ಘಟನೆ ಸಂಭವಿಸಿದ್ದು, ತಕ್ಷಣ ಬಸ್ಸಿನಲ್ಲಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರನ್ನು ರಕ್ಷಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. 

ಬೆಂಗಳೂರಿನ ಪ್ರವಾಸಿಗರು ಎರಡು ಬಸ್ಸುಗಳಲ್ಲಿ ಸಿಗಂದೂರಿಗೆ ತೆರಳುತ್ತಿದ್ದರು. ಬೆಳಗಿನ ಜಾವ ಬಸ್‌ ಪಲ್ಟಿಯಾಗಿದೆ. ತುಂಗಾ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Similar News