×
Ad

'ಜಗದೀಶ್ ಶೆಟ್ಟರ್ 100ಕ್ಕೆ 100ರಷ್ಟು ಗೆಲ್ಲುತ್ತಾರೆ': ರಕ್ತದಲ್ಲಿ ಪತ್ರ ಬರೆದ ಕಾಂಗ್ರೆಸ್ ಕಾರ್ಯಕರ್ತ

Update: 2023-04-27 13:42 IST

ಹುಬ್ಬಳ್ಳಿ: 'ಜಗದೀಶ್ ಶೆಟ್ಟರ್ ಗೆಲ್ಲುತ್ತಾರೆ, ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರತ್ತೆ' ಎಂದು ಕಾಂಗ್ರೆಸ್ ಕಾರ್ಯಕರ್ತನೋರ್ವ ರಕ್ತದಲ್ಲಿ ಪತ್ರ ಬರೆಯುವ ಮೂಲಕ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಗೆ ಶುಭ ಹಾರೈಸಿದ್ದಾರೆ. 

''ಮಾನ್ಯ ಜಗದೀಶ್ ಶೆಟ್ಟರ್ 100ಕ್ಕೆ 100ರಷ್ಟು ವಿಜಯಶಾಲಿ ಆಗುತ್ತಾರೆ. ರಕ್ತದಲ್ಲಿ ಬರೆದುಕೊಡುತ್ತೇನೆ, ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರತ್ತೆ'' ಎಂದು ಕಾಂಗ್ರೆಸ್‌ ಕಾರ್ಯಕರ್ತ ಮಂಜುನಾಥ್‌ ಎನ್.‌ ಯಂಟ್ರು ಎಂಬವರು ತಮ್ಮ ರಕ್ತದಲ್ಲಿ ಪತ್ರ ಬರೆದಿದ್ದಾರೆ.  

ಬಿಜೆಪಿ ತೊರೆದು ಕಾಂಗ್ರೆಸ್‌ ನಿಂದ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಚುನಾವಣೆ ಎದುರಿಸುತ್ತಿರುವ ಮಾಜಿ ಸಿಎಂ ಜಗದೀಶ್‌ ಶೆಟ್ಟರ್ ಸೋಲುತ್ತಾರೆ ಎಂಬುದನ್ನು ರಕ್ತದಲ್ಲಿ ಬರೆದುಕೊಡುತ್ತೇನೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸವಾಲು ಹಾಕಿದ್ದರು.

Similar News