×
Ad

ಶಿರೋಮಣಿ ಅಕಾಲಿದಳದ ವರಿಷ್ಠ ಪ್ರಕಾಶ್ ಸಿಂಗ್ ಬಾದಲ್ ಅವರಿಗೆ ಹಲವರಿಂದ ಅಂತಿಮ ನಮನ

Update: 2023-04-27 14:41 IST

ಬಾದಲ್(ಪಂಜಾಬ್) : ಎನ್‌ಸಿಪಿ ನಾಯಕ ಶರದ್ ಪವಾರ್, ಅಕಲ್ ತಖ್ತ್ ಜಥೇದಾರ್ ಗಿಯಾನಿ ಹರ್‌ಪ್ರೀತ್ ಸಿಂಗ್ ಹಾಗೂ  ಶಿರೋಮಣಿ ಗುರುದ್ವಾರ ಪರ್ಬಂಧಕ್ ಸಮಿತಿ ಮುಖ್ಯಸ್ಥ ಹರ್ಜಿಂದರ್ ಸಿಂಗ್ ಧಾಮಿ ಅವರು ಇಂದು ಶಿರೋಮಣಿ ಅಕಾಲಿದಳದ ವರಿಷ್ಠ ಪ್ರಕಾಶ್ ಸಿಂಗ್ ಬಾದಲ್ ಅವರಿಗೆ ಅಂತಿಮ ನಮನ ಸಲ್ಲಿಸಿದರು.

ಕೊನೆಯ ವಿಧಿವಿಧಾನಗಳು  ಕುಟುಂಬದ ಕೃಷಿ ಭೂಮಿಯಲ್ಲಿ ನಡೆದಿದೆ.

ಪ್ರಕಾಶ್ ಸಿಂಗ್ ಬಾದಲ್ ಅವರು ಮಂಗಳವಾರ ತಮ್ಮ 95 ನೇ ವಯಸ್ಸಿನಲ್ಲಿ ನಿಧನರಾದರು.

ಅವರ ಪಾರ್ಥಿವ ಶರೀರವನ್ನು ಅಂತಿಮ 'ದರ್ಶನ'ಕ್ಕಾಗಿ ಅವರ ನಿವಾಸದಲ್ಲಿ ಇರಿಸಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನರು ಶ್ರದ್ಧಾಂಜಲಿ ಸಲ್ಲಿಸಲು ಮತ್ತು ಕುಟುಂಬದೊಂದಿಗೆ ದುಃಖವನ್ನು ವ್ಯಕ್ತಪಡಿಸಲು ಸರತಿ ಸಾಲಿನಲ್ಲಿ ನಿಂತಿದ್ದಾರೆ.

ಪ್ರಕಾಶ್ ಸಿಂಗ್ ಬಾದಲ್ಸ್ ಅವರ ಮಗ ಸುಖಬೀರ್ ಬಾದಲ್, ಅವರ ಪತ್ನಿ ಹರ್ಸಿಮ್ರತ್ ಕೌರ್ ಬಾದಲ್, ಅವರ ಇಬ್ಬರು ಪುತ್ರಿಯರು ಹಾಗೂ  ಒಬ್ಬ ಮಗ ಅವರ ನಿವಾಸದಲ್ಲಿ ಅವರ ಪಕ್ಕದಲ್ಲಿ ನಿಂತಿದ್ದರು.

ಗುರುವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಅಂತ್ಯಕ್ರಿಯೆ ನೆರವೇರಿದೆ.

Similar News