ಡಿಕೆಶಿ ವಿರುದ್ಧ ಜೆಡಿಎಸ್ ನಿಂದ ಸ್ಪರ್ಧಿಸಿದ್ದ ನಾರಾಯಣಗೌಡ ಕಾಂಗ್ರೆಸ್ ಗೆ ಸೇರ್ಪಡೆ
ಬೆಂಗಳೂರು: ಕಳೆದ ಬಾರಿ (2018) ಕನಕಪುರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧವೇ ಸ್ಪರ್ಧಿಸಿದ್ದ ನಾರಾಯಣಗೌಡ ಅವರು ಗುರುವಾರ ಕಾಂಗ್ರೆಸ್ ಗೆ ಸೇರ್ಪಡೆಯಾದರು.
ನಾರಾಯಣಗೌಡರ ಜೊತೆಗೆ ಬೆಂಗಳೂರು ದಕ್ಷಿಣ ಕ್ಷೇತ್ರದ ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಪ್ರಭಾಕರ್ ರೆಡ್ಡಿ ಅವರು ಸಹ ಕಾಂಗ್ರೆಸ್ ಸೇರಿದ್ದಾರೆ.
ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆಯಾದ ಇಬ್ಬರು ನಾಯಕರನ್ನು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್, ಸಂಸದ ಡಿ.ಕೆ ಸುರೇಶ್ ಅವರು ಪಕ್ಷದ ಧ್ವಜ ನೀಡಿ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಎಂಎಲ್ಸಿಗಳಾದ ಎಸ್. ರವಿ, ದಿನೇಶ್ ಗೂಳಿಗೌಡ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
ಕೆಪಿಸಿಸಿ ಅಧ್ಯಕ್ಷರಾದ @DKShivakumar, ಸಂಸದರಾದ @DKSureshINC ಅವರ ಸಮ್ಮುಖದಲ್ಲಿ ಜೆಡಿಎಸ್ ಮುಖಂಡರಾದ ಕನಕಪುರದ ನಾರಾಯಣಗೌಡ ಹಾಗೂ ಬೆಂಗಳೂರು ದಕ್ಷಿಣದ ಪ್ರಭಾಕರ ರೆಡ್ಡಿ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಎಂಎಲ್ಸಿಗಳಾದ ಎಸ್. ರವಿ, ದಿನೇಶ್ ಗೂಳಿಗೌಡ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು. pic.twitter.com/l3DwQbJmdj
— Karnataka Congress (@INCKarnataka) April 27, 2023