ಎ.29 ರಂದು ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಕಾಲೇಜಿನ ಪದವಿ ಪ್ರದಾನ ಸಮಾರಂಭ
ಮಂಗಳೂರು, ಎ.27: ಫಾದರ್ ಮುಲ್ಲರ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜಿನ ಹೋಮಿಯೋಪಥಿ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ 33ನೇ ಪದವಿ ಪ್ರದಾನ ಸಮಾರಂಭವು ಎ.29ರಂದು ಬೆಳಗ್ಗೆ 10 ಗಂಟೆಗೆ ಕಂಕನಾಡಿ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆಯಲಿದೆ ಎಂದು ಫಾದರ್ ಮುಲ್ಲರ್ ಸೇವಾ ಸಂಸ್ಥೆ ಗಳ ನಿರ್ದೇಶಕ ಫಾ.ರಿಚರ್ಡ್ ಅಲೋಶಿಯಸ್ ಕುವೆಲ್ಲೊ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಸಮಾರಂಭದ ಅಧ್ಯಕ್ಷತೆಯನ್ನು ಮಂಗಳೂರು ಕ್ರೈಸ್ತ ಧರ್ಮಪ್ರಾಂತದ ಧರ್ಮಾಧ್ಯಕ್ಷ ಮತ್ತು ಫಾದರ್ ಮುಲ್ಲರ್ ಸೇವಾ ಸಂಸ್ಥೆಗಳ ಅಧ್ಯಕ್ಷ ಡಾ.ಪೀಟರ್ ಪೌಲ್ ಸಲ್ಡಾನ ವಹಿಸಲಿದ್ದಾರೆ. ವಿನಾಯಕ ಮಿಷನ್ ರಿಸರ್ಚ್ ಫೌಂಡೇಶನ್, ಡೀಮ್ಡ್ ಟು ಬಿ ಯುನಿವರ್ಸಿಟಿಯ ಉಪಕುಲಪತಿ ಡಾ.ಪಿ.ಕೆ.ಸುಧೀರ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು.
ಈ ಸಂದರ್ಭದಲ್ಲಿ 97 ಹೋಮಿಯೋಪಥಿ ಮತ್ತು 18 ಸ್ನಾತಕೋತ್ತರ ಪದವಿ ಪದವಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು. ಮೇ 6ರಂದು ದೇರಳಕಟ್ಟೆ ಹೋಮಿಯೋಪಥಿ ಕಾಲೇಜು ಸಭಾಂಗಣದಲ್ಲಿ ಸ್ನಾತಕೋತ್ತರ ಪದವಿಯ ಬೆಳ್ಳಿ ಹಬ್ಬ ಸಮಾರಂಭವೂ ನಡೆಯಲಿದೆ ಎಂದು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಕಾಲೇಜಿನ ಆಡಳಿತಾಧಿಕಾರಿ ರೋಶನ್ ಕ್ರಾಸ್ತಾ, ಪ್ರಾಂಶುಪಾಲ ಇ.ಎಸ್.ಜೆ.ಪ್ರಭು ಕಿರಣ್, ಉಪ ಪ್ರಾಂಶುಪಾಲ ಡಾ.ವಿಲ್ಮಾ ಮೀರಾ ಡಿಸೋಜ, ವೈದ್ಯಕೀಯ ಅಧೀಕ್ಷಕ ಡಾ.ಗಿರೀಶ್ ನಾವಡ, ಸಂಯೋಜಕ ಡಾ.ರಂಜನ್ ಸಿ ಬ್ರಿಟೊ, ಮಾಧ್ಯಮ ಸಂಯೋಜಕ ಡಾ.ಅನುಷಾ ಜಿ.ಎಸ್., ಧೀರಜ್ ಉಪಸ್ಥಿತರಿದ್ದರು.