×
Ad

ಉಡುಪಿ: ರಾಹುಲ್ ಗಾಂಧಿ ಆಗಮಿಸಿದ ಹೆಲಿಕಾಪ್ಟರ್ ತಪಾಸಣೆ ನಡೆಸಿದ ಅಧಿಕಾರಿಗಳು

Update: 2023-04-27 19:48 IST

ಉಡುಪಿ : ಉಚ್ಚಿಲದಲ್ಲಿ ಮೀನುಗಾರರೊಂದಿಗೆ ಸಂವಾದ ನಡೆಸಲು ಶಿವಮೊಗ್ಗದಿಂದ ಹೆಲಿಕಾಪ್ಟರ್‌ನಲ್ಲಿ ಆಗಮಿಸಿದ ಕಾಂಗ್ರೆಸ್ ನಾಯಕ  ಉಡುಪಿ ಆದಿಉಡುಪಿಯ ಹೆಲಿಪ್ಯಾಡ್‌ನಲ್ಲಿ ಬಂದಿಳಿದಾಗ, ಅವರು ಆಗಮಿಸಿದ ಹೆಲಿಕಾಪ್ಟರ್‌ನ್ನು ಚುನಾವಣಾಧಿಕಾರಿಗಳು ತಪಾಸಣೆ ಗೊಳಪಡಿಸಿದರು.

ಶಿವಮೊಗ್ಗದ ನಿಗದಿತ ವೇಳೆಗಿಂತ ಸ್ವಲ್ಪ ತಡವಾಗಿ ಸಂಜೆ 4 ಗಂಟೆ ಸುಮಾರಿಗೆ ಆಗಮಿಸಿದ ರಾಹುಲ್ ಗಾಂಧಿ, ತಕ್ಷಣವೇ ಕಾರಿನಲ್ಲಿ ಉಚ್ಚಿಲಕ್ಕೆ ಪ್ರಯಾಣ ಬೆಳೆಸಿದರು. ಈ ವೇಳೆ ಹೆಲಿಪ್ಯಾಡ್‌ನಲ್ಲಿ ಉಪಸ್ಥಿತರಿದ್ದ ಚುನಾವಣಾಧಿಕಾರಿಗಳು ಹೆಲಿಕಾಪ್ಟರ್‌ ಒಳಗೆ ತಪಾಸಣೆ ನಡೆಸಿದರು.

ರಾಹುಲ್ ಗಾಂಧಿ ಅವರು ಝೀರೋ ಟ್ರಾಪಿಕ್ ಮೂಲಕ ರಸ್ತೆ ಮಾರ್ಗವಾಗಿ ಕಾಪು ತಾಲೂಕಿನ ಉಚ್ಚಿಲಕ್ಕೆ ತೆರಳಿದರು. ಹೆಲಿಪ್ಯಾಡ್‌ನಲ್ಲಿ ಜಿಲ್ಲೆಯ ಕಾಂಗ್ರೆಸ್ ನಾಯಕರು ರಾಹುಲ್‌ ಗಾಂಧಿಗೆ ಸ್ವಾಗತ ಕೋರಿದರು. 

Similar News