ಲಿಫ್ಟ್ ನಲ್ಲಿ ಸಿಲುಕಿ ಯುವಕ ಮೃತ್ಯು
Update: 2023-04-27 21:08 IST
ಬೆಂಗಳೂರು, ಎ.27: ಇಲ್ಲಿನ ಜೆ.ಸಿ.ರಸ್ತೆಯ ಭರತ್ ಸರ್ಕಲ್ ಬಳಿಯ ವಾಣಿಜ್ಯ ಕಟ್ಟಡದ ಲಿಫ್ಟ್ ನಲ್ಲಿ ಸಿಲುಕಿ ಉತ್ತರಪ್ರದೇಶ ಮೂಲದ ಯುವಕ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.
ವಿಕಾಸ್ (26) ಸಾವನ್ನಪ್ಪಿದ ಯುವಕನಾಗಿದ್ದು, ಈತ ಉತ್ತರಪ್ರದೇಶದಿಂದ ಬೆಂಗಳೂರಿಗೆ ಆರು ತಿಂಗಳ ಹಿಂದೆ ಕೆಲಸಕ್ಕೆ ಬಂದಿದ್ದರು. ವಾಣಿಜ್ಯ ಕಟ್ಟಡದಲ್ಲಿ ನಿನ್ನೆ ಸಂಜೆ 7 ಗಂಟೆ ಸುಮಾರಿಗೆ ಲಿಫ್ಟ್ ನಲ್ಲಿ ಸಿಲುಕಿ ಮೃತಪಟ್ಟಿದ್ದಾರೆನ್ನಲಾಗಿದೆ.
ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಈ ಸಂಬಂಧ ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.